Sunday, October 18, 2026
Sunday, October 18, 2026

ಪ್ರಧಾನಿ ಮೈಸೂರು ಭೇಟಿ: ಬೊಮ್ಮಾಯಿ ಅವರೊಡನೆ ವಿಡಿಯೋ ಸಂವಾದ

Date:

ಜೂನ್ 20 ಹಾಗೂ 21ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿರುವ ಮೋದಿ ಇಂದು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ್ದಾರೆ. ಈ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಇದರೊಂದಿಗೆ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಮೈಸೂರಿನ ಅರಮನೆ ಮೈದಾನದಲ್ಲಿ ಜೂನ್‌ 21 ರಂದು ವಿಶ್ವ ಯೋಗ ದಿನಾಚರಣೆ ನಡೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರುಗಲಿದೆ.

ಹಾಗಾಗಿ ಇದುವರೆಗೆ ಜಡ್ಡುಗಟ್ಟಿದ್ದ ಪಾಲಿಕೆ ಆಕ್ಟೀವ್ ಮೂಡ್‌ಗೆ ಬಂದಿದ್ದು ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ರಸ್ತೆ ಸೇರಿದಂತೆ ನಗರದ ಹೃದಯ ಭಾಗಗಳಲ್ಲಿ ಕಿತ್ತು ಹೋಗಿದ್ದ ರಸ್ತೆಗಳನ್ನು ಸರಿಪಡಿಸುವ ಕಾರ್ಯಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಸಭೆಯ ನಂತರ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ”ಪ್ರಧಾನಿಗಳ ಭೇಟಿ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಿ. ಯಾವುದೇ ರೀತಿಯ ಲೋಪಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ” ಎಂದು ಕಟ್ಟು ನಿಟ್ಟಿನ‌ ಸೂಚನೆ ನೀಡಿದರು.

ಯೋಗ ದಿನಾಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದ ಅವರು, ಪ್ರಧಾನಿಗಳ ಎರಡು ದಿನಗಳ ಸಿದ್ಧತೆಗಳ ಕುರಿತು ವಿವರವಾಗಿ ಚರ್ಚಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಬಿ.ಎಚ್. ಅನಿಲ್ ಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕೌಶಲ್ಯಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಶ್ಮಿ ಮಹೇಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...