ನಮ್ಮ ಸರ್ಕಾರ ಬಂದ ಮೇಲೆ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. 15 ಸಾವಿರ ಶಿಕ್ಷಕರನ್ನು ಶೀಘ್ರವೇ ಭರ್ತಿ ಮಾಡಲಾಗುತ್ತದೆ. ಕಾಲೇಜಿನಲ್ಲಿ 6 ಸಾವಿರ ಸ್ಮಾರ್ಟ್ ಕ್ಲಾಸ್‌ಗಳನ್ನು ಆರಂಭಿಸಲಾಗತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಬೆಳಗಾವಿಯಲ್ಲಿ ನಡೆದ ವಾಯವ್ಯ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಥಮ ಬಾರಿಗೆ ಒಂದೇ ವರ್ಷದಲ್ಲಿ 7 ಸಾವಿರ ಶಾಲಾ ಕೊಠಡಿಗಳನ್ನು ಗ್ರಾಮೀಣ ಭಾಗದಲ್ಲಿ ಕಟ್ಟಲು ಅನುದಾನ ನೀಡಿ, ಇದೇ ವರ್ಷದಲ್ಲಿ ಪೂರ್ತಿಗೊಳಿಸಲು ಸೂಚಿಸಲಾಗಿದೆ.
7 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತದೆ. ಜೊತೆಗೆ ವಿದೇಶದ ವಿವಿಯೊಂದಿಗೆ ಒಡಂಬಡಿಕೆ ಮಾಡಲಾಗುತ್ತದೆ. ಆರ್ ಆಯಂಡ್ ಡಿ ನೀತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.