ಗಂಭೀರ ಅನಾರೋಗ್ಯದ ಕಾರಣದಿಂದಾಗಿ ಸಾಕಷ್ಟು ವರ್ಷಗಳಿಂದ ದುಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಸುದ್ದಿ ವೈರಲ್ ಆಗಿವೆ.
ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ (ನಿವೃತ್ತ) ಪರ್ವೇಜ್ ಮುಷರಫ್ಅವರನ್ನು ದುಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯಕೀಯ ವರದಿಗಳ ಪ್ರಕಾರ, ಮುಷರಫ್ ಹೃದಯ ಮತ್ತು ರಕ್ತದೊತ್ತಡದ ಸಮಸ್ಯೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
2016 ರಿಂದಲೂ ವೈದ್ಯಕೀಯ ಚಿಕಿತ್ಸೆಯ ಕಾರಣದಿಂದಾಗಿ ಅವರು ದುಬೈನಲ್ಲಿ ವಾಸ ಮಾಡುತ್ತಿದ್ದರು. ಅಂದಿನಿಂದ ಅವರು ಸ್ವದೇಶವಾದ ಪಾಕಿಸ್ತಾನಕ್ಕೂ ಮರಳಿರಲಿಲ್ಲ. ಪಾಕಿಸ್ತಾನದಲ್ಲಿ ಪರ್ವೇಜ್ ಮುಷರಫ್ ವಿರುದ್ಧ ದೇಶದ್ರೋಹದ ಪ್ರಕರಣವೂ ದಾಖಲಾಗಿತ್ತು. ವಿಚಾರಣೆಗೆ ಸ್ವದೇಶಕ್ಕೆ ಆಗಮಿಸುವಂತೆ ಕೋರ್ಟ್ ಹಲವು ಬಾರಿ ನೋಟಿಸ್ ನೀಡಿತ್ತು.
ಪಾಕಿಸ್ತಾನದ ಮಾಜಿ ಅಧ್ಯಕ್ಷ ತೀವ್ರ ಅನಾರೋಗ್ಯದಿಂದ
ಮುಷ್ರಫ್ ದುಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಹಿತಿ; ಪರ್ವೇಜ್ ಮುಷರಫ್ ಅವರು ಅಮೈಲೋಯಿ ಡೊಸೀಸ್ (Amyloidosis) ಎಂಬ ಅಪರೂಪದ ಕಾಯಿಲೆಗೆ ತುತ್ತಾಗಿದ್ದಾರೆ. ಇದು ಪ್ರೋಟೀನ್ ಗಳ ಅಸಾಧಾರಣ ಬೆಳವಣಿಗೆಯಿಂದ ಜೀವಕೋಶದ ಕಾರ್ಯವಿಧಾನವನ್ನು ಬದಲಾಯಿಸುವ ಪ್ರಕ್ರಿಯೆ ಒಳಗೊಂಡಿದೆ. ಫೋಟ್ರೀಸ್ ಹಿರಾನಂದನ್ ಆಸ್ಪತ್ರೆಯ ವೈದ್ಯರಾದ ಡಾ. ಅಥುಲ್ ಇಂಗಲೆ ಅವರು ಈ ಕಾಯಿಲೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಮುಷ್ರಫ್ ಅವರ ಕುಟುಂಬದ ಸದಸ್ಯರು ಟ್ವಿಟರ್ ನಲ್ಲಿ ತಿಳಿಸಿರುವಂತೆ ನಿಧನದ ಸುದ್ದಿ ಅಲ್ಲಗೆಳೆದಿದ್ದಾರೆ. ಮುಷ್ರಫ್ ಅವರು ವೆಂಟಿಲೇಟರ್ ನಲ್ಲಿ ಇಲ್ಲ. ಕಳೆದ ಮೂರು ವಾರಗಳಿಂದ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಹೇಳಿದ್ದಾರೆ. ನಿಧನದ ಬಗ್ಗೆ ಅಧಿಕೃತ ಹೇಳಿಕೆ ಬಂದಿಲ್ಲ.

