Sunday, October 18, 2026
Sunday, October 18, 2026

ನೈಋತ್ಯ ರೈಲ್ವೆ ಮಾರ್ಗ ಬಂಟ್ವಾಳದವರೆಗೆ ವಿಸ್ತರಣೆ

Date:

ನೈಋತ್ಯ ರೈಲ್ವೇ ಮೈಸೂರು ವಿಭಾಗವು ಮೈಸೂರು ನಿಲ್ದಾಣದಲ್ಲಿ ಪ್ರಾರಂಭಿಸಿದ್ದ ಒಂದು ನಿಲ್ದಾಣ ಒಂದು ಉತ್ಪನ್ನ ಯೋಜನೆಯನ್ನು ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಿಗೆ‌ ವಿಸ್ತರಿಸಿದೆ.

ನಿಲ್ದಾಣಗಳಲ್ಲಿ ಸ್ಥಳೀಯ ವಿಶೇಷ ಉತ್ಪನ್ನಗಳು ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಒದಗಿಸುವ ಮೂಲಕ ಅವುಗಳನ್ನು ಉತ್ತೇ ಜಿಸುವುದು ಉದ್ದೇಶ.

ಪ್ರಯಾಣಿಕರಿಗೆ ಭಾರತದ ಶ್ರೀಮಂತ ಪರಂಪರೆಯನ್ನು ಪರಿಚಯಿಸುವ ಸಲುವಾಗಿ ಮತ್ತು ರೈಲು ನಿಲ್ದಾಣಗಳಲ್ಲಿ ಸ್ಥಳೀಯ ಉತ್ಪನ್ನಗಳನ್ನು ಜನಪ್ರಿಯಗೊಳಿಸಿ ಸಮಾಜದ ಕೆಳಸ್ತರದಲ್ಲಿರುವ ವರ್ಗಕ್ಕೆ ಹೆಚ್ಚುವರಿ ಆದಾಯದ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ 2022-23ರ ಕೇಂದ್ರ ಬಜೆಟ್‌ನಲ್ಲಿ ಒಂದು ನಿಲ್ದಾಣ ಒಂದು ಉತ್ಪನ್ನ ಯೋಜನೆ ಘೋಷಿಸಿ ಮೈಸೂರು ನಿಲ್ದಾಣದಲ್ಲಿ ಆರಂಭಿಸಲಾಗಿತ್ತು.

ಪ್ರಯಾಣಿಕರ ಸಕಾರಾತ್ಮಕ ಪ್ರತಿಕ್ರಿಯೆಯ ಫ‌ಲವಾಗಿ ಸುಬ್ರಹ್ಯಣ್ಯ, ಪುತ್ತೂರು, ಬಂಟ್ವಾಳ ಒಳಗೊಂಡಂತೆ ಒಟ್ಟು 67 ನಿಲ್ದಾಣಗಳಿಗೆ ವಿಸ್ತರಿಸಲಾಗಿದೆ.

ಈ ಉತ್ಪನ್ನಗಳ ಮೂಲಕ ವ್ಯವಹಾರ ನಡೆಸುವ ಏಜೆನ್ಸಿಗಳು, ಕುಶಲಕರ್ಮಿಗಳು, ನೇಕಾರರು, ಕರಕುಶಲಿಗಳು, ಸ್ವ ಸಹಾಯ ಗುಂಪುಗಳು, ಬುಡಕಟ್ಟು ಸಹಕಾರ ಸಂಘಗಳು ಮತ್ತು ಸಮಾಜದ ಕಟ್ಟಕಡೆಯ ಮತ್ತು ದುರ್ಬಲ ವರ್ಗಗಳಿಂದ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿರ್ದಿಷ್ಟ ನಿಲ್ದಾಣಕ್ಕೆ ಒಂದಕ್ಕಿಂತ ಹೆಚ್ಚು ಅರ್ಜಿಗಳು ಬಂದಲ್ಲಿ, ಆದ್ಯತಾ ಪಟ್ಟಿಯ ಪ್ರಕಾರ ಅಥವಾ ಲಾಟರಿ ಎತ್ತುವ ಮೂಲಕ ಆಯ್ಕೆ ಮಾಡಲಾಗುತ್ತದೆ. ಪಟ್ಟಿಯಲ್ಲಿರುವ ಎಲ್ಲ ಅರ್ಜಿದಾರರು ಮುಗಿಯುವ ವರೆಗೆ ಇದನ್ನು ಮುಂದುವರಿಸಲಾಗುತ್ತದೆ.

ಪ್ರಯಾಣಿಕರಿಗೆ ಸುಲಭವಾಗಿ ಪ್ರವೇಶ ಸಾಧ್ಯವಾಗುವ ಸ್ಥಳ ದಲ್ಲಿ ತಾತ್ಕಾಲಿಕ ಕ್ರಿಯಾತ್ಮಕ ಅಂಗಡಿಯನ್ನು ಭಾಗವಹಿಸುವವರಿಗೆ ಲಭ್ಯವಾಗುವಂತೆ ಮಾಡ ಲಾಗುತ್ತದೆ. ಭಾಗವಹಿಸುವವರು ಉತ್ಪನ್ನಗಳನ್ನು ನಿಲ್ದಾಣದಲ್ಲಿ ಮತ್ತು ಪ್ಲಾಟ್‌ಫಾರ್ಮ್ ಗಳಲ್ಲಿ ಮಾರಾಟ ಮಾಡಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...