Monday, April 13, 2026
Monday, April 13, 2026

ಬೀದಿನಾಯಿಗಳ ರಕ್ಷಣೆ & ಸಾಕಾಣಿಕೆಗೆ ವಿಶೇಷ ಯೋಜನೆ – ಬೊಮ್ಮಾಯಿ

Date:

ರಾಜ್ಯದಲ್ಲಿ ಬೀದಿ ನಾಯಿಗಳ ರಕ್ಷಣೆ ಹಾಗೂ ಸಾಕಾಣಿಕೆಗೆ ವಿಶೇಷ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ನಟ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ,
ಬೀದಿ ನಾಯಿಗಳ ರಕ್ಷಣೆ ಹಾಗೂ ದತ್ತು ಸ್ವೀಕರಿಸಿ ಸಾಕುವವರಿಗೆ ಉತ್ತೇಜನ ನೀಡುವ ಸಲುವಾಗಿ ವಿಶೇಷ ಯೋಜನೆಯನ್ನು ರೂಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಶೀಘ್ರವೇ ತಜ್ಞರ ಜೊತೆ ಸಮಾಲೋಚನೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related