Thursday, February 5, 2026
Thursday, February 5, 2026

ಬಿಬಿಎಂಪಿ ವ್ಯಾಪ್ತಿ ಶಾಲೆಗಳಿಗೆ ಕೋವಿಡ್ ಮಾರ್ಗಸೂಚಿ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ 02 ಶಾಲೆಗಳಲ್ಲಿ ಮಕ್ಕಳಿಗೆ ಕೋವಿಡ್-19 ಸೋಂಕು ಪ್ರಕರಣಗಳು ಕಂಡು ಬಂದಿರುವುದರಿಂದ ಯಾವುದೇ ರೀತಿಯ ಊಹಾಪೋಹಗಳಿಗೆ ಭಯ ಪಡದೆ ಶಾಲೆಯ ಆಡಳಿತ ಮಂಡಳಿ ಮತ್ತು ಮಕ್ಕಳ ಪೋಷಕರು / ಸಾರ್ವಜನಿಕರು ಪಾಲಿಕೆ ಸೂಚಿಸುವ ಈ ಕೆಳಕಂಡ ಕ್ರಮಗಳನ್ನು ಪಾಲಿಸಬೇಕೆಂದು ಈ ಮೂಲಕ ವಿನಂತಿಸಿಕೊಳ್ಳಲಾಗಿದೆ.

ಈ ಕುರಿತಂತೆ ಬಿಬಿಎಂಪಿಯ ಮುಖ್ಯ ಆರೋಗ್ಯಾಧಿಕಾರಿ(ಸಾರ್ವಜನಿಕ ಆರೋಗ್ಯ) ಡಾ. ಬಾಲಸುಂದರ್ ಮಾಹಿತಿ ಬಿಡುಗಡೆ ಮಾಡಿದ್ದಾರೆ.

ಈ ಕೆಳಕಂಡ ಕೋವಿಡ್ ಮಾರ್ಗಸೂಚಿ ಕ್ರಮಗಳನ್ನು, ಬಿಬಿಎಂಪಿ ವ್ಯಾಪ್ತಿಯಲ್ಲಿನ ಶಾಲಾ-ಕಾಲೇಜುಗಳು, ಪೋಷಕರು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ. ಈ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸುವಂತೆ ವಿನಂತಿಸಿದ್ದಾರೆ.

ಸಂಸ್ಥೆಯ ಯಾವುದೇ ವಿದ್ಯಾರ್ಥಿಗಳು / ಸಿಬ್ಬಂದಿಗಳಲ್ಲಿ ಕೋವಿಡ್-19 ಖಾಯಿಲೆಯ ಯಾವುದೇ ರೀತಿಯ ಲಕ್ಷಣ ಕಂಡು ಬಂದಲ್ಲಿ ಅಂತಹವರಿಗೆ ತಕ್ಷಣವೇ ಕೋವಿಡ್-19 ಪರೀಕ್ಷೆ ನಡೆಸಿ, ನಂತರ ಫಲಿತಾಂಶ ಬರುವವರೆಗೂ ಪ್ರತ್ಯೇಕವಾಗಿ ಇರಿಸುವುದು.

ಸಂಸ್ಥೆಯ ಆವರಣದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡಿರುವುದನ್ನು ಎಲ್ಲಾ ಸಮಯದಲ್ಲೂ ಖಚಿತಪಡಿಸಿಕೊಳ್ಳುವುದು, ಸಾಮಾಜಿಕ ಅಂತರ ಕಾಪಾಡುವುದು ಇತ್ಯಾದಿ ಕೋವಿಡ್-19 ಖಾಯಿಲೆ ನಿಯಂತ್ರಣ ಕ್ರಮಗಳನ್ನು ಅನುಸರಿಸುವುದು.

ವಿದ್ಯಾಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು ಹೀಗಿವೆ.
ತಮ್ಮ ಸಂಸ್ಥೆಯ ದ್ವಾರದಲ್ಲಿ ಪ್ರತೀ ದಿನ ಬೆಳಿಗ್ಗೆ ಪ್ರಾರಂಭದ ಸಮಯದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ, ಭೋದಕೀಯ ಮತ್ತು ಭೋದಕೇತರ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮಾಡುವುದು.

ಸಂಸ್ಥೆಯ ಎಲ್ಲಾ ಅರ್ಹ ಭೋದಕೀಯ ಮತ್ತು ಭೋದಕೇತರ ಸಿಬ್ಬಂದಿಗಳು ಸಂಪೂರ್ಣವಾಗಿ ಕೋವಿಡ್-19 ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳುವುದು. ಲಸಿಕೆ ಪಡೆಯದ ಯಾವುದೇ ಅರ್ಹ ಸಿಬ್ಬಂದಿ ಇದ್ದಲ್ಲಿ, ಅವರಿಗೆ ಕೂಡಲೇ ಲಸಿಕೆ ಪಡೆಯುವಂತೆ ವ್ಯವಸ್ಥೆ ಮಾಡುವುದು.

ಸಂಸ್ಥೆಯ ಆವರಣದಲ್ಲಿ ಮುಖ್ಯ ಸ್ಥಳಗಳಲ್ಲಿ ಸ್ಯಾನಿಟೈಸರ್ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು.
ಸಂಸ್ಥೆಯ ಆವರಣದಲ್ಲಿ ಸ್ವಚ್ಛತೆ ಕಾಪಾಡುವುದು.

ಸಂಸ್ಥೆಯ ಎಲ್ಲಾ ಅರ್ಹ ವಿದ್ಯಾರ್ಥಿಗಳು ಸಂಪೂರ್ಣವಾಗಿ ಕೋವಿಡ್-19 ಲಸಿಕೆ ಪಡೆಯುವಂತೆ ಪ್ರೇರೇಪಿಸಿ, ಅಗತ್ಯ ಕ್ರಮ ಕೈಗೊಳ್ಳುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...