Friday, October 4, 2024
Friday, October 4, 2024

ಪಠ್ಯ ವಿಸರ್ಜನೆಯಾಗಿದೆ,ಪಠ್ಯ ಪುಸ್ತಕ ವಿಸರ್ಜಿಸಿಲ್ಲ- ಸಿದ್ಧರಾಮಯ್ಯ

Date:

ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ. ಆದರೆ, ಪಠ್ಯ ಪುಸ್ತಕವನ್ನು ವಿಸರ್ಜನೆ ಮಾಡಿಲ್ಲ. ಈ ಸರ್ಕಾರ ನಮ್ಮ ಮಕ್ಕಳಿಗೆ ವಿಷ ಉಣಿಸುವ ಕೆಲಸ ಮಾಡುತ್ತಿದೆ. ಇದನ್ನು ನಾವು ತಡೆಗಟ್ಟದೇ ಹೋದರೆ ಇಡಿ ಬದುಕನ್ನು ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಣೆ ಮಾಡಿರುವ ಪಠ್ಯವನ್ನ ವಜಾಗೊಳಿಸಬೇಕು ಎಂದು ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ನಿನ್ನೆ ಬುಧವಾರ ಪಾದಯಾತ್ರೆ ನಡೆಯಿತು. ಪಾದಯಾತ್ರೆಯ ಸಮಾರೋಪ ಸಮಾರಂಭವನ್ನು ತೀರ್ಥಹಳ್ಳಿಯ ಸಂಸ್ಕೃತಿ ಮಂದಿರದ ಎದುರು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸಾಂಸ್ಕೃತಿಕ ಭಯೋತ್ಪಾದನೆ ನಡೆಯುತ್ತಿದೆ. ಇದರ ವಿರುದ್ಧ ಕನ್ನಡದ ಮನಸುಗಳು ಹೋರಾಟ ಮಾಡಬೇಕಿದೆ. ರಾಜಕೀಯೇತರವಾಗಿ ಈ ಹೋರಾಟ ನಡೆಯಬೇಕಿದೆ. ದೇಶದಲ್ಲಿ ಅನೇಕ ಭಾರೀ ಚರಿತ್ರೆಯನ್ನು ತಿದ್ದಿದ್ದಾರೆ. ಈಗ ಪುನಃ ಚರಿತ್ರೆಯನ್ನು ತಿದ್ದಲು ಮುಂದಾಗಿದ್ದಾರೆ ಎಂದು ಸಿದ್ದರಾಮಯ್ಯ ಅವರು ದೂರಿದ್ದಾರೆ.

ಭಾರತದ ಸಂವಿಧಾನ ಸಮಾನತೆಯನ್ನು ಹೇಳುತ್ತದೆ. ಜಾತ್ಯತೀತ ತತ್ವ ಬೋಧಿಸುತ್ತದೆ. ಇದು ಮನವಾದಿಗಳಿಗೆ ಇಷ್ಟವಾಗುವುದಿಲ್ಲ. ಆರ್‌ಎಸ್‌ಎಸ್ ಹಾಗೂ ಅಂಗ ಸಂಸ್ಥೆಗಳಿಗೆ ಸಂವಿಧಾನದ ಬಗ್ಗೆ ಒಪ್ಪಿಗೆ ಇಲ್ಲ. ಸಾವಿರಾರು ವರ್ಷದಿಂದ ಮೇಲ್ವರ್ಗದ ಜನರು ಕೆಳವರ್ಗದವರ ಮೇಲೆ ದಬ್ಬಾಳಿಕೆ, ದೌರ್ಜನ್ಯ ಮಾಡಿಕೊಂಡು ಬಂದಿದ್ದಾರೆ. ಇದು ಮುಂದುವರೆಯಬೇಕು ಎಂಬುದು ಮನುವಾದಿಗಳ ಬಯಕೆಯಾಗಿದೆ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜ್ಞಾನವಿಲ್ಲದ ಸಚಿವ. ಪೊಲೀಸ್ ಇಲಾಖೆಯಲ್ಲಿನ ದುಸ್ಥಿತಿ ಗಮನಿಸಿದರೆ ಸಚಿವರಿಗೆ ಜ್ಞಾನವಿಲ್ಲ ಅನ್ನುವುದು ಗೊತ್ತಾಗುತ್ತದೆ. ಇನ್ನು ಶಿಕ್ಷಣ ಸಚಿವ ನಾಗೇಶ್ ಅವರು ಆರ್‌ಎಸ್‌ಎಸ್ ಸೇರಿಕೊಂಡು ಅವರು ಬರೀ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರು ತೀರ್ಥಹಳ್ಳಿಯವರು. ಅವರಿಗೆ ಅವಮಾನ ಆದಾಗ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ಕೊಟ್ಟು ಬರಬೇಕಿತ್ತು. ಆದರೆ, ಅವರು ಹಾಗೆ ಮಾಡಲಿಲ್ಲ. ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ಅವರನ್ನು ಸೋಲಿಸಿ ಎಂತಹವನ್ನು ಆಯ್ಕೆ ಮಾಡಿದ್ದೀರಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ. ಕೆ. ಹರಿಪ್ರಸಾದ ಅವರು ಪ್ರಶ್ನಿಸಿದ್ದಾರೆ.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ಬುಧವಾರ ಪಾದಯಾತ್ರೆ ನಡೆಸಲಾಯಿತು. ಸಾಹಿತಿಗಳು, ಪ್ರಗತಿಪರರು, ವಿವಿಧ ಸಂಘಟನೆಗಳ ಪ್ರಮುಖರು, ಸಾರ್ವಜನಿಕರು ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ್, ವಿಶ್ವಮಾನವ ವೇದಿಕೆಯ ಸಂಚಾಲಕ ಕಡಿದಾಳು ದಯಾನಂದ್, ಡಾ. ನಾ. ಡಿಸೋಜಾ, ಮಾಜಿ ಶಾಸಕ ವೈ. ಎಸ್. ವಿ. ದತ್ತಾ, ರೈತ ಮುಖಂಡರಾದ ಕೆ. ಟಿ. ಗಂಗಾಧರ್ ಹಾಗೂ ಬಸವರಾಜಪ್ಪ, ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಎಚ್. ಎಸ್. ಸುಂದರೇಶ್ ಮುಂತಾದವರು ವೇದಿಕೆಯಲ್ಲಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...