ರಾಷ್ಟ್ರಪತಿ ಚುನಾವಣೆಗೆ ದೊಡ್ಡದೊಂದು ತಿರುವು ಸಿಕ್ಕಿದೆ. ಈ ನಡುವೆ ರಾಷ್ಟ್ರಪತಿ ಚುನಾವಣೆ ಕುರಿತು ವಿಪಕ್ಷಗಳಾ ನಾಯಕರುಗಳಾದ ಮಲ್ಲಿಕಾರ್ಜುನ ಖರ್ಗೆ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್ ಜೊತೆ ರಾಜನಾಥ್ ಸಿಂಗ್ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ನಡುವೆ ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಸಾಮಾನ್ಯ ಅಭ್ಯರ್ಥಿಯ ಬಗ್ಗೆ ಚರ್ಚಿಸಲು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅನೇಕ ವಿರೋಧ ಪಕ್ಷಗಳು ಭಾಗವಹಿಸಿದ್ದವು.
ರಾಷ್ಟ್ರ ರಾಜಧಾನಿಯ ಕಾನ್ ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ಈ ಸಭೆ ನಡೆಯಿತು. ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳು ಮತ್ತೊಮ್ಮೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಹೆಸರನ್ನು ಪ್ರಸ್ತಾಪಿಸಿದವು. ಆದರೆ, ಹಿರಿಯ ನಾಯಕ ಈ ಪ್ರಸ್ತಾಪವನ್ನು ನಿರಾಕರಿಸಿದರು ಎಂದು ವರದಿಯಾಗಿದೆ.
ಇಂದಿನ ವಿರೋಧ ಪಕ್ಷದ ಸಭೆಯಲ್ಲಿ, ಎಲ್ಲಾ ಪಕ್ಷಗಳು ರಾಷ್ಟ್ರಪತಿ ಚುನಾವಣೆಗೆ ಶರದ್ ಪವಾರ್ ಅವರ ಹೆಸರನ್ನು ಪ್ರಸ್ತಾಪಿಸಿದವು. ಆದರೆ, ಅವರ ಆರೋಗ್ಯದ ಕಾರಣದಿಂದಾಗಿ ನನಗೆ ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ತಮ್ಮ ನಿರ್ಧಾರದ ಬಗ್ಗೆ ಮರುಪರಿಶೀಲಿಸುವಂತೆ ಎಲ್ಲಾ ಪಕ್ಷಗಳು ಅವರನ್ನು ವಿನಂತಿಸಿವೆ ಎಂದು ಸಿಪಿಐ ನಾಯಕ ಬಿನೋಯ್ ವಿಶ್ವಮ್ ಸಭೆಯ ನಂತರ ಮಾಧ್ಯಮ ಮಿತ್ರರೊಂದಿಗೆ ತಿಳಿಸಿದ್ದಾರೆ.
ಈ ನಡುವೆ ಫಾರೂಕ್ ಅಬ್ದುಲ್ಲಾ, ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ಮಮತಾ ಬ್ಯಾನರ್ಜಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.