Tuesday, August 25, 2026
Tuesday, August 25, 2026

ಹತ್ತನೇ ತರಗತಿ ಪೂರಕ ಪರೀಕ್ಷೆ : ಶಿಕ್ಷಣ ಇಲಾಖೆ ಸುತ್ತೋಲೆ

Date:

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ನಡುವೆಯೂ ದಿನಾಂಕ 27-06-2022ರಿಂದ 04-07-2022ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಿಗದಿ ಪಡಿಸಲಾಗಿದೆ.

ಕೋವಿಡ್ ನಡುವೆಯೂ ನಡೆಯಲಿರುವಂತೆ ಪೂರಕ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಇದೇ ಜೂನ್ 27, 2022ರಿಂದ ದಿನಾಂಕ 04-07-2022ರವರೆಗೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನಲೆಯಲ್ಲಿ, ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ದಿನಾಂಕ 14-03-2022ರಂದು ಹೊರಡಿಸಲಾಗಿರುವಂತ ಎಸ್‌ಓಪಿಯಲ್ಲಿನ ಮಾರ್ಗಸೂಚಿಯನ್ನು ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು, ಸಂಬಂಧಿಸಿದ ಇತರೆ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿ, ಸಿಇಓಗಳೊಂದಿಗೆ ಸಮನ್ವಯ ಸಾಧಿಸಿ, ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಆದೇಶಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪೂರಕ ಕೋವಿಡ್ ನಿಯಂತ್ರಣ ಕ್ರಮಗಳು ಹೀಗಿವೆ.

ದೈಹಿಕ ಅಂತರ ಕಾಪಾಡುವುದು
ಪ್ರತಿ ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳಿರಬೇಕು. ಒಂದು ಡೆಸ್ಕ್ ಗೆ ಇಬ್ಬರು ವಿದ್ಯಾರ್ಥಿಯಂತೆ ಆಸನದ ವ್ಯವಸ್ಥೆ ಮಾಡುವುದು.

ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಗೆ ಮುನ್ನಾ, ನಂತ್ರ ಸ್ಯಾನಿಟೈಸ್ ಮಾಡುವುದು
ಪರೀಕ್ಷಾ ಕೊಠಡಿಯ ಎಲ್ಲಾ ಪೀಠೋಪಕರಣ ಸ್ಯಾನಿಟೈಸ್ ಮಾಡುವುದು

ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳುವುದು

ಸೂಚನಾ ಫಲಕದ ಮುಂದೆ ವಿದ್ಯಾರ್ಥಿಗಳು ಗುಂಪು ಗೂಡದಂತೆ ತಡೆಯುವುದು
ವಿದ್ಯಾರ್ಥಿ ತನ್ನದೇ ಆದಂತ ನೀರಿನ ಬಾಟಲಿ ತರುವುದು
ಕೆಮ್ಮು, ನೆಗಡಿ, ಜ್ವರ ಮೊದಲಾದವುಗಳಿಂದ ಬಳಲುತ್ತಿರುವ, ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕನಿಷ್ಠ ಎರಡು ಕೊಠಡಿಗಳನ್ನು ವಿಶೇಷ ಕೊಠಡಿಗಳೆಂದು ಕಾಯ್ದಿರಿಸುವುದು

ಪರೀಕ್ಷಾ ಕೇಂದ್ರ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಹ್ಯಾಂಡ್ ಸ್ಯಾನಿಟೈಸ್ ಮಾಡುವುದು
ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...