ಸ್ಯಾಂಡಲ್‌ವುಡ್‌ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ.
ಚಾರ್ಲಿ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸ್ಯಾಂಡಲ್‌ವುಡ್ ಮಾತ್ರವಲ್ಲದೇ ಪರಭಾಷೆಯ ಗಣ್ಯರು ಚಾರ್ಲಿಯನ್ನು ಮೆಚ್ಚಿಕೊಂಡಿದ್ದಾರೆ. ಧರ್ಮ ಮತ್ತು ಚಾರ್ಲಿಯ ಭಾವನಾತ್ಮಕ ಕಥೆಗೆ ಪ್ರತಿಯೊಬ್ಬರಿಗೂ ಇಷ್ಟವಾಗಿದೆ.
ಈಗಾಗ್ಲೆ 777 ಚಾರ್ಲಿ ಸಿನಿಮಾವನ್ನ ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಸಾಕಷ್ಟು ಮಂದಿ ವೀಕ್ಷಿಸಿದ್ದು ಮೆಚ್ಚುಗೆ ಸೂಚಿಸಿದ್ದಾರೆ.ಈ ಸಿನಿಮಾಗೆ ಎಲ್ಲಾ ಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.
ಈ ಬಗ್ಗೆ ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 777 ಚಾರ್ಲಿ ವೀಕ್ಷಿಸಿದ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ ರಕ್ಷಿತ್ ಶೆಟ್ಟಿಗೆ ಕರೆ ಮಾಡಿದ್ದು, ಸಿನಿಮಾದ ಬಗ್ಗೆ ಹಾಡಿಹೊಗಳಿದ್ದಾರೆ.
‘ಇವತ್ತಿನ ದಿನದ ಆರಂಭ ಅದ್ಭುತವಾಗಿತ್ತು. ರಜಿನಿಕಾಂತ್ ಅವರಿಂದ ಫೋನ್ ಬಂದಿತ್ತು. ನಿನ್ನೆ ರಾತ್ರಿ ರಜನಿಕಾಂತ್ 777 ಚಾರ್ಲಿ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾದ ಅದ್ಭುತ ಮೆಕಿಂಗ್ ಗುಣಮಟ್ಟದ ಬಗ್ಗೆ, ಸಿನಿಮಾದ ಆಳವಾದ ವೀನ್ಯಾಸದ ಬಗ್ಗೆ ಹೆಚ್ಚು ಮಾತನಾಡಿದರು. ಮತ್ತು ಕ್ಲೈಮ್ಯಾಕ್ಸ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೊನೆಯಲ್ಲಿ ಆಧ್ಯಾತ್ಮಿಕ ಮಾತಿನ ಮೂಲಕ ಮುಗಿಸಿದರು. ಅಂತಹ ಮಾತುಗಳನ್ನು ಸೂಪರ್ ಸ್ಟಾರ್ ಅವರಿಂದನೇ ಕೇಳುವುದು ಅದ್ಭುತವಾಗಿತ್ತು. ಧನ್ಯವಾದಗಳು ರಜನಿ ಸರ್’ ಎಂದು ಟ್ವಿಟ್ಟರ್‌ನಲ್ಲಿ ರಕ್ಷಿತ್ ಶೆಟ್ಟಿ ಬರೆದುಕೊಂಡಿದ್ದಾರೆ.
ರಕ್ಷಿತ್ ಶೆಟ್ಟಿ ಟ್ವೀಟ್‌ಗೆ ಅಭಿಮಾನಿಗಳಿಂದ ಮೆಚ್ಚುಗೆ ಕೇಳಿ ಬಂದಿದೆ. ಇದಕ್ಕೂ ಮೊದಲು ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾವನ್ನು ವೀಕ್ಷಿಸಿದ್ದ ರಜನಿಕಾಂತ್ ಸಿನಿಮಾವನ್ನ ಹಾಡಿಹೊಗಳಿದ್ದರು.