Thursday, October 3, 2024
Thursday, October 3, 2024

ಪಾಲಿಟೆಕ್ನಿಕ್ ಪ್ರವೇಶ ಹೆಚ್ಚಳವಾಗಿದೆ- ಅಶ್ವತ್ಥನಾರಾಯಣ

Date:

ರಾಜ್ಯದ ಕಾಲೇಜುಗಳಲ್ಲಿ ಒಟ್ಟಾರೆ ಪ್ರವೇಶಾತಿ ಅನುಪಾತ ಕಳೆದ 3 ವರ್ಷಗಳಲ್ಲಿ ಶೇ. 6ಕ್ಕಿಂತಲೂ ಜಾಸ್ತಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.

ಕೋವಿಡ್ ಕಾರಣದಿಂದ ಕಳೆದ 3 ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.

ಪಾಲಿಟೆಕ್ನಿಕ್ ಗೆ ಸೇರುವವರ ಸಂಖ್ಯೆ 30,000ದಿಂದ 75,000ಕ್ಕೆ ಜಾಸ್ತಿಯಾಗಿದೆ. ಜಿಟಿಟಿಸಿ ಮತ್ತು ಐಟಿಟಿ ಜನಪ್ರಿಯಗೊಂಡಿವೆ.

ಒಟ್ಟಾರೆ, ವೈಟ್ ಕಾಲರ್ ವಲಯವಿರಲಿ ಅಥವಾ ಬ್ಲೂ ಕಾಲರ್ ವಲಯವಿರಲಿ ರಾಜ್ಯದಲ್ಲಿ ಮಾನವ ಸಂಪನ್ಮೂಲದ ಕೊರತೆ ಇರಬಾರದು ಎಂಬುದೇ ಸರ್ಕಾರದ ಧ್ಯೇಯವಾಗಿದೆ ಎಂದು ಅಶ್ವತ್ಥನಾರಾಯಣ ವಿವರಿಸಿದರು.

ಕೌಶಲ್ಯ ಕರ್ನಾಟಕ ಹಾಗೂ ದೇಶಪಾಂಡೆ ಫೌಂಡೇಷನ್ ವತಿಯಿಂದ ಐಟಿ ಅಥವಾ ಐಟಿಇಎಸ್ ವಲಯದ ಉದ್ಯಮ ನಾಯಕರು ಮತ್ತು ನವೋದ್ಯಮಿಗಳೊಂದಿಗೆ ಕರ್ನಾಟಕವನ್ನು ಕೌಶಲ್ಯಪೂರ್ಣವಾಗಿಸುವುದು ಕುರಿತು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಬದ್ಧವಾಗಿದೆ. ಪ್ರತಿಯೊಬ್ಬ ವ್ಯಕ್ತಿಯನ್ನೂ ಉತ್ಪಾದಕನನ್ನಾಗಿ ಮಾಡುವ ದಿಸೆಯಲ್ಲಿ ಅವಕಾಶಗಳನ್ನು ಸೃಷ್ಟಿಸುವುದೇ ಸರ್ಕಾರದ ಗುರಿಯಾಗಿದೆ. ಉದ್ಯಮ ವಲಯದೊಂದಿಗೆ ಸಹಭಾಗಿತ್ವದಲ್ಲಿ ಕಾರ್ಯಾಚರಿಸಲು ಸರ್ಕಾರ ಒತ್ತು ನೀಡಲಿದೆ ಎಂದರು.

ಹಿತಾಸಕ್ತಿದಾರರೊಂದಿಗೆ ಸಮಾಲೋಚಿಸಿ ಮುನ್ನಡೆಯಲು ಸರ್ಕಾರ ಮುಕ್ತ ಮನಸ್ಸು ಹೊಂದಿದೆ. ಸರ್ಕಾರವು ಯಾವುದೇ ಅಧಿಕಾರದ ಹಸ್ತಕ್ಷೇಪ ನಡೆಸದೇ ಸುಗಮ ಕಾರ್ಯನಿರ್ವಹಣೆಗೆ ಅನುವು ಮಾಡಿಕೊಡಲಿದೆ. ಉದ್ಯೋಗ, ಕೌಶಲ, ಉದ್ಯಮಶೀಲತೆ ಹೀಗೆ ಎಲ್ಲ ವಲಯಗಳಲ್ಲೂ ತರಬೇತಿ ಕೊಡುವ ಯೋಜನೆ ಹೊಂದಿದೆ ಎಂದು ವಿವರಿಸಿದರು.

ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಇಲ್ಲಿ ಉದ್ಯೋಗಾವಕಾಶ ಹೆಚ್ಚಾಗಿದೆ ಎಂದ ಅವರು, ಇದೇ ವೇಳೆ ಪ್ರತಿಯೊಂದು ಕಂಪನಿಯೂ ಸರ್ಕಾರದ ಸ್ಕಿಲ್ ಪೋರ್ಟಲ್’ಗೆ ನೋಂದಣಿಯಾಗಬೇಕು.

ಹೀಗಾದಾಗ, ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಎಲ್ಲೆಲ್ಲಿವೆ ಎಂಬುದು ಸುಲಭವಾಗಿ ಗೊತ್ತಾಗುತ್ತದೆ. ಅದನ್ನು ಆಧರಿಸಿ ಉದ್ಯೋಗಾಕಾಂಕ್ಷಿಗಳು ಶುಲ್ಕಾಧಾರಿತ ತರಬೇತಿ, ಉಚಿತ ತರಬೇತಿ, ಸರ್ಕಾರಿ ತರಬೇತಿ ಯಾವುದನ್ನು ಬೇಕಾದರೂ ಪಡೆದುಕೊಳ್ಳಬಹುದು ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ಕೂಡ ಕೌಶಲಗಳಿಗೆ ಒತ್ತು ಕೊಡುತ್ತದೆ. ನಾವು ರಾಜ್ಯದಲ್ಲಿ ಎನ್ ಇ ಪಿ ಅಳವಡಿಸಿರುವ ಮಾದರಿಯನ್ನು ದೇಶದ ಬೇರೆ ರಾಜ್ಯಗಳು ಅನುಸರಿಸುತ್ತಿವೆ. ನಾವು ಅನುಷ್ಠಾನಗೊಳಿಸಿದ ಎಲ್‌ಎಂಎಸ್ ಉತ್ತಮ ಗುಣಮಟ್ಟದಿಂದ ಕೂಡಿದೆ. ಕಲಿಕಾ ರೀತಿ ಸಂಪೂರ್ಣ ಬದಲಾಗಿದೆ. ಡಿಜಿಟಲ್ ಸಾಕ್ಷರತೆ, ಆರ್ಥಿಕ ಸಾಕ್ಷರತೆ, ಆರೋಗ್ಯ ಮತ್ತು ಸ್ವಾಸ್ಥ್ಯ, ಇವುಗಳನ್ನು ಕಡ್ಡಾಯಗೊಳಿಸಲಾಗಿದೆ. ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಸಂಯೋಜನೆಗೊಳಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಕಾರ್ಯಕ್ರಮದಲ್ಲಿ ದೇಶಪಾಂಡೆ ಪ್ರತಿಷ್ಠಾನದ ಸ್ಥಾಪಕ ಗುರುರಾಜ್ ದೇಶಪಾಂಡೆ, ಸಿಒಒ ಪಿ.ಎನ್.ನಾಯಕ್, ಸಿಇಒ ಸುನೀಲ್, ಕೌಶಲ್ಯಾಭಿವೃದ್ದಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ಉದ್ಯಮಿ ನವನೀತ್ ಸನ್ಯಾಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...