Thursday, July 9, 2026
Thursday, July 9, 2026

ದಕ್ಷಿಣದ ಚಿತ್ರನಟಿ ಮೀನಾ ಅವರ ಪತಿ ವಿದ್ಯಾಸಾಗರ್ ನಿಧನ

Date:

ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಬುಧವಾರ ಮುಂಜಾನೆ ನಿಧನರಾಗಿದ್ದಾರೆ.

ಇತ್ತೀಚಿನ ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು. ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾ ಸಾಗರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಮೀನಾ ಅವರ ಪತಿ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಹಿರಿಯ ನಟ ಶರತ್ ಕುಮಾರ್ ಟ್ವಿಟರ್ ಮೂಲಕ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತಪಡಿಸಿದ ಮೀನಾ ಅವರ ಸ್ನೇಹಿತರು, ಅಭಿಮಾನಿಗಳು ಮತ್ತು ಕುಟುಂಬದ ಹಿತೈಷಿಗಳಿಗೆ ಈ ಸುದ್ದಿ ಆಘಾತವನ್ನುಂಟು ಮಾಡಿದೆ ಮತ್ತು ದುಃಖಿತ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇವೆಂದು ಹೇಳಿದ್ದಾರೆ.

ಕನ್ನಡ ಸೇರಿದಂತೆ ವಿವಿಧ ಭಾಷಾ ಚಿತ್ರಗಳಲ್ಲಿ ನಟಿಸಿದ್ದ ಮೀನಾ, 2009 ರಲ್ಲಿ ವಿದ್ಯಾಸಾಗರ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ 11 ವರ್ಷದ ನೈನಿಕಾ ಎಂಬ ಮಗಳಿದ್ದಾಳೆ.
ವಿದ್ಯಾ ಸಾಗರ್ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ವಿವಾಹದ ಬಳಿಕ ವಿದ್ಯಾ ಸಾಗರ್ ಮತ್ತು ಮೀನಾ ಚೆನ್ನೈನಲ್ಲಿ ವಾಸ್ತವ್ಯ ಹೂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....