Wednesday, October 2, 2024
Wednesday, October 2, 2024

ವಿಶ್ವಾಸಮತಕ್ಕೆ ಮುನ್ನವೇ ರಾಜಿನಾಮೆ:ಶಿವಸೇನೆ ಬಗ್ಗೆ ಕಾಳಜಿ ಇದೆ-ಉದ್ಧವ್

Date:

ವಿಶ್ವಾಸ ಮತ ಯಾಚನೆಗೆ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಜತೆಗೆ ಉದ್ಧವ್ ಠಾಕ್ರೆ ವಿಧಾನ ಪರಿಷತ್ತಿಗೂ ರಾಜೀನಾಮೆ ನೀಡಿದ್ದಾರೆ
ಮಹಾರಾಷ್ಟ್ರ ಸರ್ಕಾರ ಇಂದು ಗುರುವಾರ ವಿಶ್ವಾಸ ಮತ ಯಾಚನೆ ಮಾಡಬೇಕಿತ್ತು.

ವಿಶ್ವಾಸ ಮತ ಯಾಚನೆಗೆ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಜತೆಗೆ ಉದ್ಧವ್ ಠಾಕ್ರೆ ವಿಧಾನ ಪರಿಷತ್ತಿಗೂ ರಾಜೀನಾಮೆ ನೀಡಿದ್ದಾರೆ. ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರು ಬಹುಮತ ಸಾಬೀತು ಪಡಿಸುವ ಆದೇಶ ನೀಡುವಲ್ಲಿ ಆತುರ ತೋರಿಸಿದ್ದಾರೆ ಎಂದು ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಬಗ್ಗೆ ಬುಧವಾರ ಸಂಜೆ 5 ಗಂಟೆಗೆ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ರಾತ್ರಿ 9 ಗಂಟೆೆಗೆ ತೀರ್ಪು ಪ್ರಕಟಿಸಿದೆ. ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡುವಂತೆ ರಾಜ್ಯಪಾಲರ ಹೊರಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಗುರುವಾರ ಬೆಳಗ್ಗೆ 11 ಗಂಟೆಗೆ ಬಹುಮತ ಸಾಬೀತು ಪಡಿಸುವಂತೆ ಠಾಕ್ರೆ ಸರ್ಕಾರಕ್ಕೆ ಹೇಳಿತ್ತು.ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದ ಕೆಲವೇ ಕ್ಷಣಗಳಲ್ಲಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂದು ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಔರಂಗಾಬಾದ್ ಹೆಸರು ಸಂಭಾಜಿನಗರ, ಉಸ್ಮಾನಾಬಾದ್ ಹೆಸರು ಧಾರಾಶಿವ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ನೀಡಿದೆ. ಅದೇ ವೇಳೆ ನವಿ ಮುಂಬೈ ಹೆಸರನ್ನು ಡಿಬಿ ಪಾಟೀಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬದಲಿಸಲಾಗುತ್ತದೆ. ವಿಶ್ವಾಸ ಮತವನ್ನು ಎದುರಿಸುತ್ತಿರುವ ಶಿವಸೇನೆಯ 31 ತಿಂಗಳ ಅವಧಿಯ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರದ ಕೊನೆಯ ಪ್ರಮುಖ ನಿರ್ಧಾರ ಇದಾಗಿದೆ.

ನಾನು ಹೆದರುವವನಲ್ಲ. ಶಿವಸೈನಿಕರ ರಕ್ತ ಬೀದಿಯಲ್ಲಿ ಬೀಳುವುದಕ್ಕಿಂತ ನಾನು ಕೆಳಗಿಳಿಯುವುದೇ ಲೇಸು. ನಾನು ಹುದ್ದೆ ಬಗ್ಗೆ ಚಿಂತಿಸುವುದಿಲ್ಲ. ನನ್ನ ಶಿವಸೈನಿಕರ ಬೆಂಬಲದ ಬಗ್ಗೆ ಕಾಳಜಿ ವಹಿಸುತ್ತೇನೆ. ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ.

ಪ್ರಜಾಪ್ರಭುತ್ವವನ್ನು ಅನುಸರಿಸಬೇಕು ಎಂದು ಉದ್ಧವ್ ಠಾಕ್ರೆ ವಿಡಿಯೊ ಸಂವಾದದಲ್ಲಿ ಹೇಳಿದ್ದು ಬಳಿಕ ರಾಜೀನಾಮೆ ಪತ್ರ ನೀಡಲು ರಾಜ್ಯಪಾಲರ ನಿವಾಸಕ್ಕೆ ತೆರಳಿದರು.

ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟಿನಿಂದಾಗಿ ಠಾಕ್ರೆ ಅವರ ತಂಡವು ಕೇವಲ 15 ಶಾಸಕರನ್ನು ಹೊಂದಿದೆ. ಇತ್ತ ಏಕನಾಥ್ ಶಿಂಧೆ ಅವರು ಶಿವಸೇನಾ, ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಅನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದು 55 ಶಾಸಕರ ಪೈಕಿ 40 ಶಿವಸೇನಾ ಶಾಸಕರ ಬೆಂಬಲ ಇದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....