Sunday, May 24, 2026
Sunday, May 24, 2026

ವೃಕ್ಷಮಾತೆಗೆ ಈಗ ರಾಜ್ಯದ ಪರಿಸರ ರಾಯಭಾರಿ ಸ್ಥಾನಮಾನ ಪ್ರದಾನ

Date:

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಬಂಗಾರದ ಕಡಗವನ್ನೂ ಮುಖ್ಯಮಂತ್ರಿಗಳು ನೀಡಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನದಲ್ಲಿ ಸರ್ಕಾರದಿಂದಲೇ ಮನೆ ನಿರ್ಮಾಣ ಮಾಡಿ ಸಾಲು ಮರದ ತಿಮ್ಮಕ್ಕ ಅವರಿಗೆ ಕೊಡುಗೆ ನೀಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಮಾತ್ರವಲ್ಲದೇ, ರಾಜ್ಯದ ಎಲ್ಲೇ ಆಗಲಿ ಪರಿಸರ ರಕ್ಷಣೆಯ ಪ್ರಚಾರ ಮಾಡಲು ಈ ಸ್ಥಾನಮಾನ ನೀಡಲಾಗಿದೆ. ಹೊರ ರಾಜ್ಯಕ್ಕೆ ತೆರಳಿದರೆ ಸರ್ಕಾರದಿಂದಲೇ ಖರ್ಚು ಭರಿಸಲಾಗುವುದು. ವಾರ್ತಾ ಇಲಾಖೆಯಿಂದ ಸಾಲುಮರದ ತಿಮ್ಮಕ್ಕ ಅವರ ವೆಬ್‌ಸೀರಿಸ್ ಮಾಡಲಾಗುವುದು. ಅವರಿಗೆ ಬೇಲೂರು ತಾಲ್ಲೂಕಿನಲ್ಲಿ ಹತ್ತು ಎಕರೆ ಭೂಮಿ ಮಂಜೂರು ಮಾಡಲಾಗುವುದು ಎಂದು ಸಿಎಂ ಹೇಳಿದರು.

ಇವತ್ತು ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಜನ್ಮದಿನಾಚರಣೆಗೆ ನಿಜಕ್ಕೂ ಅರ್ಥಪೂರ್ಣವಿದೆ. ನಾವೆಲ್ಲ ಹುಟ್ಟಿದಾಗ ಬಹಳ ಮುಗ್ಧತೆಯಿಂದ ಇರುತ್ತಿದ್ದೆವು. ದೊಡ್ಡವರಾದ ಮೇಲೂ ಮುಗ್ಧತೆ ಉಳಿಸಿಕೊಳ್ಳುವುದು ಕಷ್ಟ. ಆದರೆ ಸಾಲುಮರದ ತಿಮ್ಮಕ್ಕ ಅಜ್ಜಿಯ ಮೊಗದಲ್ಲಿ ಮಗುವಿನ ಮುಗ್ಧತೆ ಇದೆ ಎಂದು ಸಿಎಂ ಹೇಳಿದರು.

ಬೇಲೂರು ಶಾಸಕ ಲಿಂಗೇಶ್ ಮಾತನಾಡಿ, ಸಾಲುಮರದ ತಿಮ್ಮಕ್ಕ ಅವರಿಗೆ ಲಭಿಸಿದ ಪ್ರಶಸ್ತಿಗಳು ಹಾಗೂ ಅವರ ಸಾಧನೆ ಬಿಂಬಿಸಲು ವಸ್ತು ಸಂಗ್ರಹಾಲಯ ‌ನಿರ್ಮಿಸಲು ಅನುದಾನ ಹಾಗೂ ಅವರ ‌ಗ್ರಾಮ ಬಳ್ಳೂರು ಅಭಿವೃದ್ಧಿಗೆ 2 ಕೋಟಿ‌ ಅನುದಾನ ನೀಡುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...