Tuesday, August 25, 2026
Tuesday, August 25, 2026

ಎಲ್ಲಾ ಶಾಲೆಗಳೂ ಪ್ಲಾಸ್ಟಿಕ್ ಮುಕ್ತವಾಗಬೇಕು- ಡಾ.ಸೆಲ್ವಮಣಿ

Date:

2021-22 ನೇ ಸಾಲಿನಲ್ಲಿ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಆಯ್ಕೆಯಾದ 38 ಶಾಲೆಗಳ ಮುಖ್ಯ ಶಿಕ್ಷಕರುಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಆರ್ ಸೆಲ್ವಮಣಿ ಇವರು ಜೂ.29 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಜಿಲ್ಲೆಯ ಎಲ್ಲಾ ಶಾಲೆಗಳು ಪ್ಲಾಸ್ಟಿಕ್ ಮುಕ್ತವಾಗಬೇಕು, ಪೌಷ್ಠಿಕ ವನವನ್ನು ಬೆಳಸಬೇಕು, ಪ್ರತಿ ಮಗುವಿಗೂ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು ಎಂದು ಹಾಜರಿದ್ದ ಶಾಲಾ ಮುಖ್ಯಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ, ಶಿವಮೊಗ್ಗದ ಡಿ.ವೈ.ಪಿ.ಸಿ ಗಣಪತಿ ಇವರು ಸ್ವಾಗತಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ(ಆಡಳಿತ) ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಪ್ರಶಸ್ತಿ ಪಡೆದ ಶಾಲಾ ಮುಖ್ಯ ಶಿಕ್ಷಕರು, ಎಸ್‍ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...