Sunday, May 24, 2026
Sunday, May 24, 2026

ರಸಗೊಬ್ಬರ ಸಮರ್ಪಕ ಪೂರೈಕೆಗೋಸ್ಕರ ರಷ್ಯದೊಂದಿಗೆ ಒಪ್ಪಂದ

Date:

ದೇಶದಲ್ಲಿ ರಸಗೊಬ್ಬರ ಉತ್ಪಾದನೆ ಹೆಚ್ಚಿಸಲು ಹಾಗೂ ಸಮರ್ಪಕ ಗೊಬ್ಬರ ಪೂರೈಕೆಗಾಗಿ ಭಾರತೀಯ ಸಾರ್ವಜನಿಕ ವಲಯದ ಉದ್ಯಮಗಳು (ಪಿಎಸ್‌ಯು) ರಷ್ಯಾದ ಉದ್ಯಮದ ಫೋಸ್ ಆಗ್ರೋದೊಂದಿಗೆ ದೀರ್ಘಕಾಲದ ಒಪ್ಪಂದ ಮಾಡಿಕೊಂಡಿವೆ ಎಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸೂಖ್ ಮಾಂಡವೀಯ ತಿಳಿಸಿದ್ದಾರೆ.

ಭಾರತಕ್ಕೆ ಡೈ ಅಮೋನಿಯಂ ಫಾಸ್ಫೇಟ್ (ಡಿಎಪಿ) ಹಾಗೂ ಅದರ ಕಚ್ಚಾ ಸಾಮಗ್ರಿಗಳ ನಿಯಮಿತ ಮತ್ತು ಸಕಾಲಕ್ಕೆ ಸಮರ್ಪಕ ಒದಗಿಸುವ ಪ್ರಮಾಣವನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ. ಈಗಾಗಲೇ ಗೊಬ್ಬರದ ಕಚ್ಚಾ ಸಾಮಾಗ್ರಿಗಳನ್ನು ಪೈಪೋಟಿ ದರದಲ್ಲಿ ಭಾರತಕ್ಕೆ ನೀಡಲು ಸೌದಿ ಅರೇಬಿಯಾ, ರಷ್ಯಾ ಸೇರಿದಂತೆ ಇತರ ದೇಶಗಳು ಸಿದ್ಧವಿರುವುದಾಗಿ ವಿವರಿಸಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಮಾಡಿಕೊಂಡ ಈ ಒಪ್ಪಂದದಿಂದಾಗಿ ಡೈಅಮೋನಿಯಂ ಫಾಸ್ಫೇಟ್ (ಡಿಎಪಿ) ಸೇರಿದಂತೆ ಐದು ರೀತಿಯ ರಸಗೊಬ್ಬರಗಳು ಭಾರತಕ್ಕೆ ಪೂರೈಕೆ ಆಗಲಿವೆ ಎಂದು ಮನ್ಸೂಖ್ ಮಾಂಡವೀಯ ರಾಜ್ಯಸಭೆಗೆ ಸಲ್ಲಿಸಿದ ಕಡತದಲ್ಲಿ ಉಲ್ಲೇಖಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸೋಣ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಮುಂಬರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಅತ್ಯಂತ ಶಾಂತಿ, ಸೌಹಾರ್ದತೆ ಮತ್ತು...

B.Y. Raghavendra ಬೇಸೂರು ಅಣು ವಿದ್ಯುತ್ ಸ್ಥಾವರ : ಜನರು ಆತಂಕಪಡುವ ಅವಶ್ಯಕತೆಯಿಲ್ಲ- ಬಿ.ವೈ.ರಾಘವೇಂದ್ರ.

B.Y. Raghavendra "ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ; ಜನರು...

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...