ಬನವಾಸಿಯ ಜನತಾ ಕಾಲೋನಿಯಲ್ಲಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ 4ನೇ ವಾರ್ಷಿಕೋತ್ಸವವು ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳನ್ನು ವೇ: ಶ್ರೀ ಶ್ರೀನಿಧಿ ದತ್ತಾತ್ರೇಯ ಭಟ್ಟ ಮಂಗಳೂರು ಇವರ ಆಚಾರ್ಯತ್ವದಲ್ಲಿ ನಡೆಯಿತು.
ಕಾರ್ಮಿಕ ಇಲಾಖೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಮ್ ಹೆಬ್ಬಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಇತ್ತೀಚಿಗೆ ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಪ್ರಥಮ ರಾಂಕ್ ನೊಂದಿಗೆ 3 ಚಿನ್ನದ ಪದಕ ಪಡೆದ ಬನವಾಸಿಯ ನಿವಾಸಿ ಕುಮಾರಿ ಅಂಜುಮ್ ಬಷೀರ್ ಸಾಬ್ ಅವರಿಗೆ ಸನ್ಮಾನಿಸಿದರು.
ಪ್ರಸ್ತುತ ಅಂಜುಂ ಅವರು ಶಿವಮೊಗ್ಗ ಕೆಲೈವ್ ಮೀಡಿಯದಲ್ಲಿ ಉಪಸಂಪಾದಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ಭಕ್ತಾದಿಗಳಿಗೆ ಪ್ರಸಾದವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಸಿದ್ಧ ವೀರೇಶ್ ನರೇಗಲ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ತುಳಸಿ ಆರೇರ, ಶ್ರೀ ಮಧುಕೇಶ್ವರ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರಾದ ಶ್ರೀ ರಾಜಶೇಖರ ಒಡೆಯರ್, ಸಾಮಾಜಿಕ ಕಾರ್ಯಕರ್ತರಾದ ಶಿವಾನಂದ ದೀಕ್ಷಿತ, ರುದ್ರಪ್ಪ ಸಿದ್ದಪ್ಪಗೌಡ, ಗುಣಶೇಖರ ಪಿಳ್ಳೆ, ರಾಮದಾಸ ಚೌಧರಿ, ಚಂದ್ರಪ್ಪ, ಗಣಪತಿ ನಾಯ್ಕ ಹಾಗೂ ಇನ್ನಿತರರು ಉಪಸ್ಥಿತರಿದ್ದರು