Friday, March 14, 2025
Friday, March 14, 2025

ಮಳೆ ಸನ್ನಿವೇಶ ಆಧರಿಸಿ ಶಾಲೆಗೆ ರಜೆ ನಿರ್ಧರಿಸಲು ಜಿಲ್ಲಾಧಿಕಾರಿಗಳಿಗೇ ಹೊಣೆ

Date:

ರಾಜ್ಯದ ನಾನಾ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿದೆ. ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಶಾಲಾ ಕಾಲೇಜುಗಳನ್ನು ಆಯಾ ಪ್ರದೇಶಗಳ ಪರಿಸ್ಥಿತಿಯನ್ನು ಅವಲೋಕಿಸಿ ರಜೆಯನ್ನ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.

ಈ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಕೆಳಕಂಡ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶೈಕ್ಷಣಿಕ ಉಸ್ತುವಾರಿ ಅಧಿಕಾರಿ, ಸಿಬ್ಬಂದಿಗಳಿಗೆ ವಿಶೇಷ ಸುತ್ತೋಲೆಯನ್ನು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.
ತೀವ್ರ ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿರುವ ಕೆಲವು ಶಾಲಾ ಕಟ್ಟಡಗಳು ಯಾವುದೇ ಸಂದರ್ಭದಲ್ಲಿ ಹಾನಿಗೊಳಗಾಗುವ, ಬಿದ್ದು ಹೋಗುವ ಸಂಭವವಿರುತ್ತದೆ. ಪ್ರಯುಕ್ತ, ಅಂತಹ ಶಾಲಾ ಕಟ್ಟಡಗಳನ್ನು, ತರಗತಿಯ ಕೊಠಡಿ, ಶೌಚಾಲಯಗಳನ್ನು ಬಳಸದೇ ಸಮೀಪದ ಸುಸ್ಥಿತಿಯಲ್ಲಿರುವ ಕಟ್ಟಡ, ಕೊಠಡಿಗಳನ್ನು ಬಳಕೆ ಮಾಡಿಕೊಳ್ಳುವುದು. ಮಕ್ಕಳು ಶಿಥಿಲಾವಸ್ಥೆಯಲ್ಲಿರುವ ಕಟ್ಟಡ, ಕೊಠಡಿಗಳ ಮತ್ತು ಶೌಚಾಲಯಗಳ ಸಮೀಪದಲ್ಲಿ ಸುತ್ತಾಡದಂತೆ ಎಚ್ಚರಿಕೆ ಕ್ರಮ ವಹಿಸುವುದು, ಶಿಥಿಲಾವಸ್ಥೆಯಲ್ಲಿರುವ ಇಂತಹ ಕಟ್ಟಡಗಳ ತೀವ್ರತೆಯನ್ನು ಪರಿಗಣಿಸಿ ತೆರವುಗೊಳಿಸಲು ಅಥವಾ ನೆಲಸಮಗೊಳಿಸಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಇಂತಹ ಸಂದರ್ಭಗಳಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳ (ಸ್ಥಳೀಯ ಸಂಸ್ಥೆಗಳ) ಸಹಕಾರದಿಂದ ಶಾಲಾ ಕಟ್ಟಡದಲ್ಲಿ ಸಂಗ್ರಹವಾಗಿರುವ ನೀರನ್ನು ತೆರವುಗೊಳಿಸುವುದು ಹಾಗೂ ಅಗತ್ಯಾನುಸಾರ, ಸಂದರ್ಭಾನುಸಾರ ಶಾಲಾ ಮುಖ್ಯೋಪಾಧ್ಯಾಯರು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಅವರ ಪೂರ್ವಾನುಮತಿ ಪಡೆದು ಶಾಲೆಗಳಿಗೆ ರಜೆ ಘೋಷಿಸುವುದು. ಅಂತಹ ರಜಾ ದಿನಗಳಲ್ಲಿನ ಪಾಠ – ಪ್ರವಚನಗಳನ್ನು ಮುಂದಿನ ಸರ್ಕಾರಿ ರಜಾ ದಿನಗಳಲ್ಲಿ ಸರಿದೂಗಿಸುವಂತೆ ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...