Tuesday, March 24, 2026
Tuesday, March 24, 2026

ಕೊಡಗು ಜಿಲ್ಲೆ ಮಳೆಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಭೇಟಿ

Date:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಡಗು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ವೇಳೆ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಮನೆಗಳ ಪರಿಶೀಲನೆಯನ್ನು ನಡೆಸಿದರು. ಸಂಪೂರ್ಣ ಹಾಳಾಗಿರುವ ಮನೆಯವರಿಗೆ 10 ಸಾವಿರ ನೆರವನ್ನು ತಕ್ಷಣಕ್ಕೆ ನೀಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಅಪಾಯದಲ್ಲಿದ್ದ ಕೆಲವು ಮನೆಗಳನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಕಾಳಜಿ ಕೇಂದ್ರದಲ್ಲಿದ್ದಾರೆ. ಇನ್ನು ಕೆಲವರು ಸಂಬಂಧಿಕರ ಮನೆಗಳಲ್ಲಿದ್ದಾರೆ. ಸಂಬಂಧಿಕರ ಮನೆಗಳಲ್ಲಿರುವವರಿಗೂ ಕೂಡ ಅಕ್ಕಿ, ಎಣ್ಣೆ, ಬೇಳೆ, ವಿತರಣೆಯಾಗಬೇಕು ಎಂಬ ಸೂಚನೆ ನೀಡಲಾಗಿದೆ.

ಮುಖ್ಯಮಂತ್ರಿಗಳು ಮಡಿಕೇರಿಯಲ್ಲಿ ಮಳೆಯಿಂದ ಹಾನಿ ಉಂಟಾಗಿರುವ ಕುರಿತು
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಾಳಜಿ ಕೇಂದ್ರದಿಂದ ಮನೆಗೆ ತೆರಳುವ ಸಂದರ್ಭದಲ್ಲಿಯೂ ಪಡಿತರವನ್ನು ಕೊಟ್ಟು ಕಳುಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಟಾಸ್ಕ್ ಫೋರ್ಸ್ ಮಾಡಬೇಕು. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಕೆಲಸ ಮಾಡಬೇಕು. ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದಂತೆ ಕಂಟ್ರೋಲ್ ರೂಂನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಅನುದಾನ ಲಭ್ಯವಿದ್ದು, ಅಗತ್ಯ ಬಿದ್ದರೆ ಇನ್ನಷ್ಟು ಅನುದಾನವನ್ನು ಒದಗಿಸಲಾಗುವುದು ಎಂದರು.

ಮಳೆಯಿಂದ ತೊಂದರೆಗೆ ಒಳಗಾದ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ, ಶಿಕ್ಷಣ ಸಚಿವ ಬಿ. ಸಿ. ನಾಗೇಶ ಮತ್ತು ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ...