14ನೇ ಉಪರಾಷ್ಟ್ರಪತಿ ಹುದ್ದೆಗೆ ಆಕಾಂಕ್ಷಿಯಾಗಿ ಮಾರ್ಗರೆಟ್ ಆಳ್ವಾ ಇಂದು ವಿಪಕ್ಷಗಳ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮಾರ್ಗರೇಟ್ ಆಳ್ವ ಅವರನ್ನು ವಿರೋಧ ಪಕ್ಷದ ಜಂಟಿ ಅಭ್ಯರ್ಥಿಯಾಗಿದ್ದು, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಘೋಷಿಸಿದ್ದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಶಿವಸೇನೆ ನಾಯಕ ಸಂಜಯ್ ರಾವುತ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಉಪಸ್ಥಿತರಿದ್ದರು.