Sunday, May 17, 2026
Sunday, May 17, 2026

ಐಟಿ ಬಿಟಿಯ ನಾವೀನ್ಯತಾ ಸೂಚ್ಯಂಕ: ರಾಜ್ಯಕ್ಕೆಪ್ರಥಮ ಸ್ಥಾನ

Date:

ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವವೇ ಗುರುತಿಸುವಂತಹ ಸಾಧನೆ ಮಾಡಿರುವ ಕರ್ನಾಟಕ ನಾವೀನ್ಯತೆಯಲ್ಲಿ ದೇಶದ ಇತರೆ ಎಲ್ಲ ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆ. ನೀತಿ ಆಯೋಗ ಬಿಡುಗಡೆ ಮಾಡಿರುವ ಮೂರನೇ ವರ್ಷದ ಭಾರತೀಯ ನಾವೀನ್ಯತಾ ಸೂಚ್ಯಂಕದಲ್ಲಿ ಮೂರನೇ ವರ್ಷವೂ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನ ಪಡೆದುಕೊಂಡು ಗಮನ ಸೆಳೆದಿದೆ.

ರಾಜ್ಯಗಳ ಮಟ್ಟದಲ್ಲಿ ಇರುವ ನಾವೀನ್ಯತಾ ಸಾಮರ್ಥ್ಯ ಹಾಗೂ ಪೂರಕ ವಾತಾವರಣವನ್ನು ಪರಿಶೀಲಿಸಿ ನೀತಿ ಆಯೋಗ ಈ ರ್ಯಾಂಕಿಂಗ್‌ ಪಟ್ಟಿಯನ್ನು ಸಿದ್ಧಪಡಿಸಿದೆ. 17 ದೊಡ್ಡ ರಾಜ್ಯಗಳು’, 10 ಈಶಾನ್ಯ, ಗುಡ್ಡಗಾಡು ರಾಜ್ಯಗಳು’ ಹಾಗೂ ‘9 ಕೇಂದ್ರಾಡಳಿತ ಪ್ರದೇಶಗಳು ಹಾಗೂ ನಗರ ರಾಜ್ಯಗಳು’ ಎಂಬ ವಿಭಾಗದಲ್ಲಿ ಈ ಪಟ್ಟಿಯನ್ನು ತಯಾರಿಸಲಾಗಿದೆ.

ಜಾಗತಿಕ ನಾವೀನ್ಯತಾ ಸೂಚ್ಯಂಕದ ರೀತಿಯೇ ಈ ಪಟ್ಟಿ ಇದ್ದು, ದೊಡ್ಡ ರಾಜ್ಯಗಳ ವಿಭಾಗದಲ್ಲಿ ಕರ್ನಾಟಕ 3ನೇ ವರ್ಷವೂ ಪ್ರಥಮ ಸ್ಥಾನ ಬಾಚಿಕೊಂಡಿದೆ.

ನಾವೀನ್ಯತಾ ಸೂಚ್ಯಂಕವನ್ನು ನೀತಿ ಆಯೋಗದ ಉಪಾಧ್ಯಕ್ಷ ಸುಮನ್‌ ಬೇರಿ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ವರನ್‌ ಅಯ್ಯರ್‌ ಸಮ್ಮುಖದಲ್ಲಿ ಗುರುವಾರ ಬಿಡುಗಡೆ ಮಾಡಿದರು. ಈಶಾನ್ಯ ರಾಜ್ಯಗಳ ವಿಭಾಗದಲ್ಲಿ ಮಣಿಪುರ, ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಯಲ್ಲಿ ಚಂಡೀಗಢ ಪ್ರಥಮ ಸ್ಥಾನಗಳಿಸಿವೆ.

ಕರ್ನಾಟಕ 18.01 ಅಂಕ ಗಳಿಸಿ ಪ್ರಥಮ ಸ್ಥಾನದಲ್ಲಿದ್ದರೆ, ತೆಲಂಗಾಣ ಹಾಗೂ ಹರ್ಯಾಣ ನಂತರದ ಸ್ಥಾನದಲ್ಲಿವೆ. 10.97 ಅಂಕಗಳೊಂದಿಗೆ ಛತ್ತೀಸ್‌ಗಢ ಕೊನೆಯ ಸ್ಥಾನದಲ್ಲಿದೆ. ಈ ವಿಭಾಗದ ಸರಾಸರಿ ಅಂಕ 14.02 ಆಗಿದೆ. ವಿದೇಶಿ ನೇರ ಹೂಡಿಕೆ ಆಕರ್ಷಿಸುವಲ್ಲಿ ಅತ್ಯುತ್ಕೃಷ್ಟ ಸಾಧನೆ ತೋರಿರುವುದು ಹಾಗೂ ಬೃಹತ್‌ ಪ್ರಮಾಣದ ವೆಂಚರ್‌ ಕ್ಯಾಪಿಟಲ್‌ ಒಪ್ಪಂದಗಳು ಆಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮೂರನೇ ವರ್ಷವೂ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...