Sunday, May 17, 2026
Sunday, May 17, 2026

ರಾಜ್ಯದಲ್ಲಿ 480 ನಮ್ಮ ಕ್ಲಿನಿಕ್ ಪ್ರಾರಂಭ-ಡಾ.ಸುಧಾಕರ್

Date:

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 480 ನಮ್ಮ ಕ್ಲಿನಿಕ್ ಪ್ರಾರಂಭಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ನಿಮ್ಹಾನ್ಸ್ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಿದುಳು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ವಿಶೇಷ ಕ್ಲಿನಿಕ್ ಸ್ಥಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ 243 ವಾರ್ಡ್‍ಗಳಲ್ಲೂ ನಮ್ಮ ಕ್ಲಿನಿಕ್ ಪ್ರಾರಂಭಿಸಲಾಗುತ್ತದೆ. ರಾಜ್ಯದ ಪ್ರತಿಯೊಬ್ಬರಿಗೂ ನೇತ್ರ ತಪಾಸಣೆ ಕೈಗೊಂಡು ಅಗತ್ಯವಿದ್ದರೆ ಉಚಿತ ಕನ್ನಡಕ ನೀಡಲಾಗುತ್ತದೆ. ಕಣ್ಣಿನ ಪರೆಯ ಶಸ್ತ್ರ ಚಿಕಿತ್ಸೆಯನ್ನು ಸಹ ಮಾಡಲಾಗುತ್ತದೆ. ಆರೋಗ್ಯ ಸೇವೆಯನ್ನು ಸರ್ಕಾರ ಮೂಲಭೂತ ಹಕ್ಕು ಎಂದು ಭಾವಿಸಿದೆ. ಶ್ರೇಷ್ಠ ಚಿಕಿತ್ಸೆ ಹಾಗೂ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದು ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ.

ರಾಜ್ಯದ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತ ಕಾರ್ಯಕ್ರಮವನ್ನು ಮೆಚ್ಚಿ ಕೇಂದ್ರ ಸರ್ಕಾರ ಇಡೀ ದೇಶಕ್ಕೆ ವಿಸ್ತರಣೆ ಮಾಡುವ ಘೋಷಣೆ ಮಾಡಿದೆ. ಕ್ರಿಕೆಟ್‍ಪಟು ರಾಬಿನ್ ಉತ್ತಪ್ಪ ಅವರು ಮಾನಸಿಕ ಆರೋಗ್ಯ ಕಾರ್ಯಕ್ರಮದ ರಾಯಭಾರಿಯಾಗಿದ್ದಾರೆ. ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೊದಲ ಬ್ರೈನ್ ಹೆಲ್ತ್ ಕ್ಲಿನಿಕ್‍ನ್ನು ಉದ್ಘಾಟನೆ ಮಾಡಲಾಗಿದೆ.

ಮಾನಸಿಕ ರೋಗಿಗಳಿಗೆ ಆರಂಭಿಕ ಚಿಕಿತ್ಸೆ ನೀಡುವ ಬಗ್ಗೆ ನಿಮ್ಹಾನ್ಸ್‍ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂರು ವೈದ್ಯರಿಗೆ ತರಬೇತಿ ನೀಡಲಾಗಿದೆ. ಮಾನಸಿಕ ರೋಗಕ್ಕೆ ಸಂಬಂಧಿಸಿದಂತೆ ಎಲ್ಲರೂ ನಿಮ್ಹಾನ್ಸ್‍ಗೆ ಬರುವ ಅಗತ್ಯವಿಲ್ಲ. ಆರಂಭಿಕ ಹಂತದಲ್ಲಿ ತರಬೇತಿ ಪಡೆದಂತಹ ಈ ವೈದ್ಯರ ಬಳಿ ಚಿಕಿತ್ಸೆ ಪಡೆಯಬಹುದು. 3ನೇ ಹಂತದ ಅಥವಾ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಮಾತ್ರ ನಿಮ್ಹಾನ್ಸ್‍ಗೆ ಬರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಖಾಸಗಿ ಆಯಂಬುಲೆನ್ಸ್‍ಗಳ ದರ ಪರಿಷ್ಕರಣೆಯನ್ನು ಸಾರಿಗೆ ಇಲಾಖೆ ಮಾಡುತ್ತದೆ. ರೋಗಿ ಹಾಗೂ ಅವರ ಸಂಬಂಧಿಕರಿಗೆ ದುಬಾರಿ ದರ ವಿಧಿಸುತ್ತಿರುವ ಬಗ್ಗೆ ಸಾರಿಗೆ ಸಚಿವರೊಂದಿಗೆ ಚರ್ಚಿಸಲಾಗುತ್ತದೆ. ಬೇಕಾಬಿಟ್ಟಿ ದರ ವಿಧಿಸುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದ ಅವರು, ಸರ್ಕಾರಿ ಆಯಂಬುಲೆನ್ಸ್‍ಗಳ ಸೇವೆ ಉಚಿತವಾಗಿ ದೊರೆಯುತ್ತಿದೆ ಎಂದು ತಿಳಿಸಿದ್ದಾರೆ.

ನಗರಪ್ರದೇಶಗಳಲ್ಲಿ ಕೊರೋನಾ ಪಾಸಿಟಿವ್ ಪ್ರಮಾಣ ಹೆಚ್ಚಾಗುತ್ತಿದೆ. ಆದರೂ ಆತಂಕಪಡುವ ಅಗತ್ಯವಿಲ್ಲ. ಈ ವ್ಯಾಧಿ ಅಷ್ಟೊಂದು ತೀವ್ರವಾಗಿ ಉಲ್ಭಣವಾಗುತ್ತಿಲ್ಲ. ರೋಗಕ್ಕೆ ಸಂಬಂಧಿಸಿದ ಮಾದರಿಗಳನ್ನು ಕಳುಹಿಸಿ ಅಲ್ಲಿ ವಿಶೇಷ ತಳಿ ರೂಪಾಂತರಗೊಂಡಿರುವ ಬಗ್ಗೆ ಮಾಹಿತಿ ದೊರೆತರೆ ಮುಂದಿನ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...