Sunday, October 11, 2026
Sunday, October 11, 2026

ಗುತ್ತಿಗೆ ಆಧಾರದಲ್ಲಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕರ ನೇಮಕಾತಿ

Date:

ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಚೇರಿ ಸಹಾಯಕರು, ಶೈಕ್ಷಣಿಕ ಸಹಾಯಕರಾಗಿ 1152 ಮಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಚೇರಿ ಸಹಾಯಕರು ಮತ್ತು ಶೈಕ್ಷಣಿಕ ಸಹಾಯಕರಾಗಿ 1152 ಮಂದಿಯನ್ನು ನೇಮಕಾತಿ ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದರು.

ಶೂ, ಸಾಕ್ಸ್ ವಿತರಣೆಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ. 123 ಕೋಟಿ ಅನುದಾನ ಸರ್ಕಾರ ಒದಗಿಸಿತ್ತು. ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ವಿತರಣೆ ಮಾಡಲು ಬಜೆಟ್ ನಲ್ಲಿ ಕೇವಲ ಅನೌನ್ಸ್ ಮಾಡಲಾಗಿತ್ತು. ಇಂದಿನ ಕ್ಯಾಬಿನೆಟ್ ನಲ್ಲಿ ಅಪ್ರೂವ್ ಮಾಡಿದ್ದೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...