Thursday, March 19, 2026
Thursday, March 19, 2026

ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸಂಪುಟದ ತೀವ್ರ ವಿರೋಧ-ಮಾಧುಸ್ವಾಮಿ

Date:

ಕಸ್ತೂರಿ ರಂಗನ್ ವರದಿ ಆಧಾರದ ಮೇಲೆ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರಾಜ್ಯ ಸಚಿವ ಸಂಪುಟ ತೀವ್ರವಾಗಿ ವಿರೋಧಿಸಿದೆ.

ಸಚಿವ ಸಂಪುಟ ಸಭೆ ನಂತರ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.
ಸಿ. ಮಾಧುಸ್ವಾಮಿ, ವರದಿ ಅನುಷ್ಠಾನಕ್ಕೆ ಮೊದಲಿನಿಂದಲೂ ರಾಜ್ಯ ವಿರೋಧ ವ್ಯಕ್ತಪಡಿಸುತ್ತಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜುಲೈ 6 ರಂದು ಐದನೇ ಅಧಿಸೂಚನೆಯನ್ನು ಹೊರಡಿಸಿತು, ಅದು ಈ ಹಿಂದೆ ಹೊರಡಿಸಿದ ಇತರ ನಾಲ್ಕು ಪ್ರಕಟಣೆಗಳಿಗೆ ಹೋಲುತ್ತದೆ. ವರದಿ ಜಾರಿಯಾದರೆ 1,553 ಗ್ರಾಮಗಳ ಜನರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಸೂಕ್ತ ಸಮೀಕ್ಷೆ ನಡೆಸದೆ ವರದಿ ಸಿದ್ಧಪಡಿಸಲಾಗಿದ್ದು, ರಾಜ್ಯದಿಂದ ವ್ಯಕ್ತವಾದ 1,000 ಕ್ಕೂ ಹೆಚ್ಚು ಆಕ್ಷೇಪಣೆಗಳನ್ನು ಪರಿಗಣಿಸಲಾಗಿಲ್ಲ ಎಂದು ಅವರು ಹೇಳಿದರು.

ಕಸ್ತೂರಿ ರಂಗನ್ ವರದಿ ಜಾರಿಯಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದೆ. ಈ ವಿಚಾರದಲ್ಲಿ ಹೊಂದಾಣಿಕೆ ಸಾಧ್ಯವಿಲ್ಲ ಎಂದು ಹೇಳಿದ್ದೇವು. ನಮ್ಮ ನಿಲುವನ್ನು ಈಗಾಗಲೇ ಎರಡು ಬಾರಿ ಹೇಳಿದ್ದೇವೆ. ಸಂಪುಟದ ಅನುಮೋದನೆಯಿಂದ ಮೂರನೇ ಬಾರಿಗೆ ಹೀಗೆ ಹೇಳುತ್ತಿರುವುದಾಗಿ ಅವರು ತಿಳಿಸಿದರು.

ರಾಜ್ಯ ಸರ್ಕಾರ ವರದಿ ಒಪ್ಪಿಕೊಂಡು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಗಳಿಂದ ಜನರನ್ನು ಸ್ಥಳಾಂತರಿಸಲು ಸಾಧ್ಯವಿಲ್ಲ. ನಾವು ಕೇಂದ್ರಕ್ಕೆ ಪತ್ರ ಬರೆಯುತ್ತೇವೆ ಮತ್ತು ಚರ್ಚೆಯ ನಂತರ ಮನವಿಯೊಂದನ್ನು ನೀಡುತ್ತೇವೆ ಎಂದು ಅವರು ಹೇಳಿದರು.

ಮುಂದಿನ ದಿನಗಳಲ್ಲಿ ರಾಜ್ಯದ ನಿರ್ಧಾರವನ್ನು ತಿಳಿಸಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಿಂದ ನಿಯೋಗ ದೆಹಲಿಗೆ ಹೋಗಲಿದೆ. ಅದಕ್ಕೂ ಮೊದಲು ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸಲು ಬಯಸಿದ್ದೇವೆ. ಇಲ್ಲದಿದ್ದರೆ, ಕೇಂದ್ರದಿಂದ ಅಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸುವ ಅವಕಾಶವಿದೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...