Sunday, August 23, 2026
Sunday, August 23, 2026

ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಲಿಂಕ್

Date:

ಭಾರತದ ಚುನಾವಣಾ ಆಯೋಗ, ಚುನಾವಣಾ ಕಾನೂನು ಮತ್ತು ನಿಯಮಗಳಿಗೆ 4 ಪ್ರಮುಖ ತಿದ್ದುಪಡಿಗಳನ್ನು ಮಾಡಿದೆ. ಇವುಗಳು ಆಗಸ್ಟ್ ಒಂದರಿಂದ ಜಾರಿಗೊಳ್ಳಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕುರ್ಮ ರಾವ್ ಎಂ. ಅವರು ಇಂದಿಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇವುಗಳಲ್ಲಿ ಪ್ರಮುಖವಾದುದು ಮತದಾರರ ಗುರುತು ಚೀಟಿಗೆ ಆಧಾರ ಕಾರ್ಡ್‌ನ್ನು ಲಿಂಕ್ ಮಾಡುವುದು. ಮತದಾನದ ವೇಳೆ ಮತದಾರರ ಗುರುತನ್ನು ಖಚಿತಪಡಿಸಿಕೊಳ್ಳಲು ಈ ಜೋಡಣೆಗೆ ಸೂಚಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಆದರೆ, ಎಪಿಕ್ ಕಾರ್ಡ್‌ಗೆ ಆಧಾರ ಜೋಡಣೆ ಕಡ್ಡಾಯವಲ್ಲ. ಒಂದು ವೇಳೆ ಎಪಿಕ್ ಕಾರ್ಡ್‌ಗೆ ಮತದಾರನ ಆಧಾರ್ ಲಿಂಕ್ ಆಗದೇ ಇದ್ದರೂ ಆತನಿಗೆ ಮತದಾನ ನಿರಾಕರಿಸುವಂತಿಲ್ಲ. ಮತದಾರರ ಪಟ್ಟಿಗೆ ಆತನ ಹೆಸರನ್ನು ನೊಂದಾಯಿಸಲು ಸಹ ನಿರಾಕರಿಸುವಂತಿಲ್ಲ ಎಂದು ಡಿ.ಸಿ ಅವರು ಹೇಳಿದ್ದಾರೆ.

ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ನೊಂದಾಯಿಸಿಕೊಳ್ಳಲು ಇದುವರೆಗೆ ಪ್ರತಿ ವರ್ಷ ಇದ್ದ ಒಂದು ಅವಕಾಶವನ್ನು ಈಗ ನಾಲ್ಕು ಅವಕಾಶವಾಗಿ ಬದಲಾಯಿಸಲಾಗಿದೆ. ಇದರಂತೆ ಜ.1, ಎ.1, ಜುಲೈ1, ಅ.1ರಂದು ಮತದಾರರ ಪಟ್ಟಿಗೆ ನೊಂದಾಣಿ ಮಾಡಿಕೊಳ್ಳಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...