Wednesday, March 12, 2025
Wednesday, March 12, 2025

ಪ್ರವೀಣ್ ಹತ್ಯೆ ಪ್ರಕರಣದಲ್ಲಿ 10 ಜನರ ಬಂಧನ- ಆರಗ ಜ್ಞಾನೇಂದ್ರ

Date:

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರೆಗೂ 10 ಮಂದಿ ಶಂಕಿತರನ್ನ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಸಿಎಂ ಜೊತೆಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು ಪ್ರಕರಣದ ಕುರಿತು ಸಿಎಂ ಜೊತೆ ಮಾತನಾಡಿದ್ದೇವೆ.

ಪ್ರವೀಣ್‌ ಸೂದ್‌ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ. ಇನ್ನು ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 10 ಮಂದಿ ವಶಕ್ಕೆ ಪಡೆಯಲಾಗಿದೆ. ಪೊಲೀಸರು ತುಂಬಾನೇ ಚುರುಕಾಗಿ ತನಿಖೆ ನಡೆಸುತ್ತಿದ್ದಾರೆ. ಇನ್ನು ನಮ್ಮ ಪೊಲೀಸರು ಕೇರಳಕ್ಕೆ ತೆರಳಿ ಹುಡುಕಾಟ ನಡೆಸುತ್ತಿದ್ದಾರೆ. ಅಗತ್ಯವಿದರೆ, ಪ್ರಕರಣವನ್ನ ಎನ್‌ಐಎಗೆ ಒಪ್ಪಿಸಲು ಸಿದ್ದರಿದ್ದೇವೆ ಎಂದರು.

ಅಂದ್ಹಾಗೆ, ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ನಂತ್ರ ಬೆಳ್ಳಾರೆ ಉದ್ವಿಗ್ನಗೊಂಡಿದ್ದು, 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಇನ್ನು ಪರಿಸ್ಥಿತಿ ಇನ್ನಷ್ಟು ಬಿಗಾಡಿಸುವ ಲಕ್ಷಣಗಳು ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ಕರೆದಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ, ಸಿಟಿ ರವಿ ಸೇರಿ ಹಲವರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Election Commission of India ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ರಾಜಕೀಯ ಹಿರಿಯ ನಾಯಕರೊಂದಿಗೆ ಸಂವಾದಕ್ಕೆ ಆಹ್ವಾನ

Election Commission of India ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕಾನೂನಿನ...

Ninasam ಕಾಲೇಜು ವಿದ್ಯಾರ್ಥಿಗಳಿಗೆ ಎಂಟು ದಿನಗಳ ರಂಗ ಶಿಬಿರ

Ninasam ಸ್ಪಂದನ (ರಿ) ಸಾಗರ , ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ...

Tarunodaya Shivamogga ನಿಸರ್ಗದಾನಂದ ಸವಿಯ ಬೇಕೆಂದರೆ ಚಾರಣ ಹೋಗಲೇ ಬೇಕು- ಜಿ.ವಿಜಯ ಕುಮಾರ್

Tarunodaya Shivamogga ಜರಿ, ತೊರೆ, ಹಕ್ಕಿ ಪಕ್ಷಿಗಳ ಕಲರವ, ಪ್ರಕೃತಿ...

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...