ಸಾವಿಗೆ ಸಾವು ಅಥವಾ ಎನ್‌ಕೌಂಟರ್‌ಗಳು ಪರಿಹಾರವಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಶಿವಮೊಗ್ಗದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮಾಡಿಟ್ಟಿರುವ ಅಸಹ್ಯವನ್ನು ತೊಳೆಯಲು ಸಮಯ ಹಿಡಿಯುತ್ತಿದೆ. ಮಂಗಳೂರು ಈಗ ಸಹಜ ಸ್ಥಿತಿಗೆ ಬಂದಿದೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕೊಲೆ ನಡೆದಾಗ ಹಂತಕರನ್ನು ಎನ್‌ಕೌಂಟರ್ ಮಾಡಬೇಕು ಎಂದು ಅನ್ನಿಸುವುದು ಸಹಜ. ಪ್ರಾಣ ತೆಗೆಯುವುದು, ರಕ್ತ ಹರಿಸುವುದು ಹುಡುಗಾಟದ ಮಾತಲ್ಲ. ಇವೆಲ್ಲವೂ ನಿಲ್ಲಬೇಕು. ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ಮನವಿ ಮಾಡುತ್ತಿದ್ದೇವೆ. ಬೇಗ ತೀರ್ಪು ಬಂದು ಬಿಸಿ ಇದ್ದಾಗಲೇ ತಟ್ಟಿದರೆ ಮುಂದೆ ಇಂಥಹ ಕೃತ್ಯ ನಡೆಸುವವರಿಗೆ ಎಚ್ಚರಿಕೆ ಗಂಟೆಯಾದಂತಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.
