ರಾಷ್ಟ್ರಪತಿ ಚುನಾವಣೆಯ ಬಳಿಕ, ಚುನಾವಣಾ ಆಯೋಗವು ಈಗ ಆಗಸ್ಟ್ 6 ರಂದು ನಿಗದಿಯಾಗಿರುವ 16 ನೇ ಉಪರಾಷ್ಟ್ರಪತಿ ಚುನಾವಣೆಗೆ ಸಜ್ಜಾಗಿದೆ.
ಅಭ್ಯರ್ಥಿಗಳ ನಾಮನಿರ್ದೇಶನ ಪ್ರಕ್ರಿಯೆಯೊಂದಿಗೆ ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ. ಜುಲೈ 5 ರಂದು 16 ನೇ ಉಪರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಯಿತು. ಜುಲೈ 19 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು.
ಜುಲೈ 20ರಂದು ನಾಮಪತ್ರ ಪರಿಶೀಲನೆ ನಡೆದಿತ್ತು. ಹಾಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ. ಈ ಬಾರಿ ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನ್ಖರ್
ಹಾಗೂ ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಕಣದಲ್ಲಿದ್ದಾರೆ.