ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಕಾರ್ಮಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕಾರ್ಮಿಕರ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ಕನಿಷ್ಠ ವೇತನ ಶೇಕಡ 10 ರಷ್ಟು ಹೆಚ್ಚಳ ಮಾಡಲಾಗಿದೆ.
ಕನಿಷ್ಠ ವೇತನಕ್ಕೆ ತುಟ್ಟಿಭತ್ಯೆ, ಭವಿಷ್ಯ ನಿಧಿ ಶೇಕಡ 12, ಇಎಸ್‌ಐ ಶೇಕಡ 3.5 ರಷ್ಟು ಸೇರಿಸಿ ಕಾರ್ಮಿಕರ ಮಾಸಿಕ ವೇತನ ನಿಗದಿಪಡಿಸಲಾಗುತ್ತದೆ. ಈ ಬಾರಿ ವೇತನ ಪರಿಷ್ಕರಿಸಿ ಕನಿಷ್ಠ ವೇತನ ಶೇಕಡ 10 ರಷ್ಟು ಹೆಚ್ಚಳ ಮಾಡಿದ್ದು ಆಗಸ್ಟ್ ತಿಂಗಳಿನಿಂದಲೇ ಪರಿಷ್ಕೃತ ವೇತನ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.
5 ವರ್ಷಕ್ಕೊಮ್ಮೆ ಕನಿಷ್ಠ ವೇತನ ಪರಿಷ್ಕರಣೆ ಮಾಡಲಾಗುತ್ತಿದ್ದು, ಕೊನೆಯದಾಗಿ 2016ರಲ್ಲಿ ವೇತನ ಪರಿಷ್ಕರಿಸಲಾಗಿತ್ತು. ಕಳೆದ ಐದು ವರ್ಷದಲ್ಲಿ ಅನೇಕ ಕಾರಣಗಳಿಂದ ವೇತನ ಪರಿಷ್ಕರಿಸಿರಲಿಲ್ಲ. ಜೀವನ ನಿರ್ವಹಣೆ ವೆಚ್ಚ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಕನಿಷ್ಠ ವೇತನ ಪರಿಷ್ಕರಿಸಬೇಕೆಂದು ಕಾರ್ಮಿಕ ಸಂಘಟನೆಗಳಿಂದ ಒತ್ತಾಯಿಸಲಾಗಿತ್ತು.