ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷ ಕಾಂಗ್ರೆಸ್ ಗೆ ಪರೋಕ್ಷವಾಗಿ ತಿವಿದಿದೆ. ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳಾಗಿವೆ ಎಂದು ಹೇಳಿದ್ದಾರೆ.
ಸತತ 9ನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಷ್ಟ್ರದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಭಾರತದಲ್ಲಿ ಕುಟುಂಬ ರಾಜಕಾರಣದಿಂದ ನಮ್ಮ ದೇಶದ ಪ್ರತಿಭೆ, ಸಾಮರ್ಥ್ಯ ಹಾಳಾಗುತ್ತಿದೆ.
ಭ್ರಷ್ಟಾಚಾರಕ್ಕೆ ಇದೂ ಒಂದುಕಾರಣವಾಗುತ್ತಿದೆ ಎಂದರು.
ಭಾರತದಲ್ಲಿ ಕುಟುಂಬ ರಾಜಕಾರಣದಿಂದ ನಮ್ಮ ದೇಶದ ಪ್ರತಿಭೆ, ಸಾಮರ್ಥ್ಯ ಹಾಳಾಗುತ್ತಿದೆ. ಭ್ರಷ್ಟಾಚಾರಕ್ಕೆ ಇದೂ ಒಂದುಕಾರಣವಾಗುತ್ತಿದೆ. ಪರಿವಾರವಾದದಿಂದಲೂ ನಾವು ಬಿಡಿಸಿಕೊಳ್ಳಬೇಕು. ನಾವು ನಮ್ಮ ಸಂಸ್ಥೆಗಳನ್ನು ಉಳಿಸಿಕೊಳ್ಳಬೇಕು. ರಾಜಕಾರಣದಲ್ಲಿಯೂ ಪರಿವಾರವಾದವು ಪರಿವಾರ ಭದ್ರಪಡಿಸಿಕೊಳ್ಳಲು ಯತ್ನಿಸುತ್ತದೆಯೇ ಹೊರತು ದೇಶದ ಅಭಿವೃದ್ಧಿಗೆ ಗಮನ ಕೊಡುವುದಿಲ್ಲ. ಬನ್ನಿ, ಭಾರತದ ರಾಜಕಾರಣವನ್ನು ಶುದ್ಧೀಕರಣಗೊಳಿಸಲು ನಾವು ದೇಶದ ಪರಿವಾರವಾದವನ್ನು ಕೊನೆಗಾಣಿಸೋಣ. ಇದು ಇಂದಿನ ಅನಿವಾರ್ಯತೆ ಎಂದರು.