Thursday, December 18, 2025
Thursday, December 18, 2025

ನಗರದಲ್ಲಿ ಸಹಜ ಸ್ಥಿತಿ ಇದೆ. ವ್ಯಾಪಾರಿಗಳಿಗೆ ಅವಕಾಶಕೊಡಿ- ಗೋಪಿನಾಥ್

Date:

ಶಿವಮೊಗ್ಗ ನಗರದಲ್ಲಿ ಬುಧವಾರದಿಂದ ಸಂಜೆಯ ನಂತರ ವ್ಯಾಪಾರ – ವಹಿವಾಟಿಗೆ ಪೊಲೀಸರು ಅವಕಾಶ ನಿರಾಕರಿಸುತ್ತಿದ್ದು, ಇದರಿಂದ ವರ್ತಕರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ. ನಿಯಮಾನುಸಾರ ವ್ಯಾಪಾರ-ವಹಿವಾಟಿಗೆ ಅವಕಾಶ ನೀಡುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಜಿಲ್ಲಾಧಿಕಾರಿಗೆ ಮನವಿ ಪತ್ರ ಅರ್ಪಿಸಿದೆ.

ಈ ಹಿನ್ನೆಲೆಯಲ್ಲಿ ನಗರದ ಡಿಸಿ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಅರ್ಪಿಸಲಾಯಿತು.

ಸಂಜೆಯ ನಂತರ ವ್ಯಾಪಾರ – ವಹಿವಾಟಿಗೆ ನಿರ್ಬಂಧ ಹಾಕುತ್ತಿರುವುದರಿಂದ ಉದ್ದಿಮೆದಾರರಿಗೆ ಅಪಾರ ನಷ್ಟ ಉಂಟಾಗುತ್ತಿದೆ. ಸದ್ಯ ನಗರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಕಾನೂನು-ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಈ ಹಿನ್ನಲೆಯಲ್ಲಿ ಸಂಜೆಯ ನಂತರವೂ ವ್ಯಾಪಾರ ವಹಿವಾಟಿಗೆ ನಿಯಮಾನಸಾರ ಅವಕಾಶ ನೀಡಬೇಕು ಎಂದು ಸಂಘ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...