Thursday, December 18, 2025
Thursday, December 18, 2025

ಜಿಲ್ಲೆಯಲ್ಲಿ ಪ್ರತಿ ಬುಧವಾರ ಲಸಿಕಾಮೇಳ : ಕೆ.ಎಸ್. ಈಶ್ವರಪ್ಪ

Date:

ಜಿಲ್ಲೆಯಲ್ಲಿ ಶೇ.88ರಷ್ಟು ಮಂದಿ ಮೊದಲ ಬಾರಿಯ ಹಾಗೂ ಶೇ.41ರಷ್ಟು ಮಂದಿ ಎರಡನೇ ಬಾರಿಯ ಲಸಿಕೆಯನ್ನು ಪಡೆದಿದ್ದಾರೆ. ಈವರೆಗೆ ಲಸಿಕೆಯನ್ನೇ ಪಡೆಯದಿರುವವರು 2 ಲಕ್ಷ ಜನರಿದ್ದಾರೆ. ಕೂಡಲೇ ಲಸಿಕೆ ಪಡೆದು ತಮ್ಮ ಕುಟುಂಬದ ಹಾಗೂ ಸಾರ್ವಜನಿಕರ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಲಸಿಕೆ ಹಾಕಿಸಿಕೊಳ್ಳುವಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮನವಿ ಮಾಡಿದ್ದಾರೆ.

ಜಿಲ್ಲಾಡಳಿತವು ನಗರದ ಪೊಲೀಸ್‌ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಒಳಗೊಂಡು ಒಟ್ಟು 141ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಈವರೆಗೆ ಲಸಿಕೆಯನ್ನು ಹಾಕಿಸಿಕೊಳ್ಳದಿರುವ ಸಾರ್ವಜನಿಕರು ಲಸಿಕೆಯನ್ನು ಹಾಕಿಸಿಕೊಳ್ಳಲು ಧಾವಿಸುವಂತೆ ಸಚಿವರು ಕರೆ ನೀಡಿದರು. ಈ ಲಸಿಕಾ ಆಂದೋಲನದ ಯಶಸ್ಸಿಗಾಗಿ ಆರೋಗ್ಯ ಇಲಾಖೆಯ ತಜ್ಞವೈದ್ಯರಲ್ಲದೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಶ್ರಮಿಸುತ್ತಿದ್ದಾರೆ. ಪ್ರತಿ ಬುಧವಾರದಂದು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಲಸಿಕಾಮೇಳವನ್ನು ಆಯೋಜಿಸಲಾಗುತ್ತಿದೆ ಎಂದರು.

ರಾಜ್ಯೋತ್ಸವದ ಈ ಶುಭ ದಿನದಂದು ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಜಿಲ್ಲೆಯ 4ಜನರಿಗೆ ರಾಜ್ಯ ಸರ್ಕಾರವು ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿರುವುದು ನಮ್ಮೆಲ್ಲರಿಗೆ ಸಂತಸದ ತಂದಿದೆ ಎಂದರು.

ಇತ್ತೀಚೆಗೆ ಕೇಳಿ ಬರುತ್ತಿರುವ ಬಿಟ್ ಕಾಯಿನ್ ಮತ್ತು ಡ್ರಗ್ಸ್ ಅಕ್ರಮಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಸರ್ಕಾರ ನಿರ್ಧಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಅದಕ್ಕಾಗಿ ರಾಜ್ಯ ಗೃಹ ಸಚಿವರಿಗೆ ವಿಶೇಷ ಅಧಿಕಾರ ನೀಡಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಮೇಯರ್ ಸುನಿತಾ ಅಣ್ಣಪ್ಪ, ಚನ್ನಬಸಪ್ಪ, ಜ್ಯೋತಿಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...