ಉತ್ತರ ಕನ್ನಡದ ಶಿರಸಿಯ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಒಪರೇಟಿವ್ ಬ್ಯಾಂಕ್ ಲಿವಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.
ಕಿರಿಯ ಗುಮಾಸ್ತರು ಮತ್ತು ಕಿರಿಯ ಮೇಲ್ವಿಚಾರಕರ ಹುದ್ದೆಗಳು ಸೇರಿದಂತೆ ಒಟ್ಟು 41 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶಿರಸಿಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 10 ಆಗಿದೆ. ಈ ಹುದ್ದೆಗೆ ಅರ್ಜಿಯನ್ನು ಅಭ್ಯರ್ಥಿಗಳು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಹುದ್ದೆಯ ಮಾಹಿತಿ
ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಒಪರೇಟಿವ್ ಬ್ಯಾಂಕ್ ಲಿವಿಟೆಡ್
ಹುದ್ದೆಯ ಹೆಸರು
ಕಿರಿಯ ಗುಮಾಸ್ತರು ಮತ್ತು ಕಿರಿಯ ಮೇಲ್ವಿಚಾರಕರು
ಹುದ್ದೆಗಳ ಸಂಖ್ಯೆ
41
ಕಾರ್ಯ ನಿರ್ವಹಣೆ ಸ್ಥಳ
ಶಿರಸಿ, ಉತ್ತರ ಕನ್ನಡ
ವೇತನ
27650-52650 ರೂ ಮಾಸಿಕ
ಶೈಕ್ಷಣಿಕ ಅರ್ಹತೆ
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ಪದವಿಯಲ್ಲಿ ಶೇ 60ರಷ್ಟು ಗುಣಾಂಕ ಪಡೆದ ಪದವೀಧರರು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಆಪರೇಟಿಂಗ್ ಮತ್ತು ಅಪ್ಲಿಕೇಶನ್ ಜ್ಞಾನ ಹೊಂದಿರಬೇಕು.
ವಯೋಮಿತಿ
ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಪ.ಜಾ, ಪ.ಪಂ ಮತ್ತು ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿ ಸಲ್ಲಿಕೆ ವಿಧಾನ: ಆಫ್ಲೈನ್
ಅರ್ಜಿ ಶುಲ್ಕ:
ಪ.ಜಾ, ಪ.ಪಂ ಮತ್ತು ಪ್ರವರ್ಗ-1, ವಿಕಲಚೇತನ ಅಭ್ಯರ್ಥಿಗಳು: 295 ರೂ.
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 590 ರೂ
ಅರ್ಜಿ ಶುಲ್ಕ ಪಾವತಿ ವಿಧಾನ ಕೆಡಿಸಿಸಿ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಚಾಲ್ತಿ ಖಾತೆಗೆ 122000553848 ಜಮಾಪಡಿಸಿ, ಚಲನ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.
ಅರ್ಜಿ ಪಡೆಯುವ ವಿಧಾನ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಡಿಸಿಸಿ ಬ್ಯಾಂಕಿನ ಶಾಖೆಗೆ ಭೇಟಿ ನೀಡಿ, ರೂ. 59 ಪಾವತಿಸಿ ಅರ್ಜಿ ನಮೂನೆಯನ್ನು ಪಡೆದು ನಂತರ ಅದನ್ನು ಸ್ವ-ಹಸ್ತಾಕ್ಷರದಿಂದ ಭರ್ತಿ ಮಾಡಿ ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಲಕೋಟೆಯ ಮೇಲೆ “ಕಿರಿಯ ಗುಮಾಸ್ತ/ಕಿರಿಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ” ಅಂತಾ ಸ್ಪಷ್ಟವಾಗಿ ನಮೂದಿಸಿ ಕಛೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಕಛೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು
ಅರ್ಜಿ ಸಲ್ಲಿಸುವ ವಿಳಾಸ
ವ್ಯವಸ್ಥಾಪಕ ನಿರ್ದೇಶಕರು, ಕೆನರಾ ಡಿ.ಸಿ.ಸಿ ಬ್ಯಾಂಕ್ ಲಿ.,
ಪ್ರಧಾನ ಕಛೇರಿ, ಹೊಸ ಮಾರುಕಟ್ಟೆ, ಶಿರಸಿ – 581 402 (ಉ.ಕ)
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಆಗಸ್ಟ್ 2022
ಅರ್ಜಿ ಫಾರ್ಮ್ ಪಡೆಯಲು ಕೊನೆಯ ದಿನಾಂಕ: 8 ಸೆಪ್ಟೆಂಬರ್ 2022
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 10 ಸೆಪ್ಟೆಂಬರ್ 2022
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ವೆಬ್‌ಸೈಟ್: www.kanaradccbank.com
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
- ನಿಗದಿತ ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಲಗತ್ತಿಸಿ
ಮೀಸಲಾತಿ ಪ್ರಮಾಣ ಸೇರಿದಂತೆ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಅಗತ್ಯ ಪ್ರಮಾಣ ಪತ್ರಗಳು ಲಗತ್ತಿಸಿ ಮೇಲಿನ ವಿಳಾಸಕ್ಕೆ ಸಲ್ಲಿಸಿ.