ಆ.22 ರಂದು ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ.ಪ್ರಕಾಶ್ ಇವರು ನಗರದ ಎನ್.ಟಿ. ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ:ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕ ವಿದ್ಯಾರ್ಥಿನಿಲಯಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದರು.
ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ, ಹಾಜರಿರುವ ವಿದ್ಯಾರ್ಥಿಗಳ ಸಂಖ್ಯೆ, ವಿದ್ಯಾರ್ಥಿಗಳು ಬಯೋ ಮೆಟ್ರಿಕ್ ಹಾಜರಾತಿ ನಮೂದಿಸುತ್ತಿರುವ ಬಗ್ಗೆ, ಸೋಲಾರ್ ವಾಟರ್ ಹೀಟರ್ ನಿರ್ವಹಣೆ, ಕುಡಿಯುವ ನೀರಿನ ವಾಟರ್ ಫಿಲ್ಟರ್ ನಿರ್ವಹಣೆ, ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ, ಸ್ಟಾಕ್ ರಿಜಿಸ್ಟರ್ ಸರಿಯಾಗಿ ನಿರ್ವಹಿಸಿರುವ ಬಗ್ಗೆ ಪರಿಶೀಲಿಸಿದರು.
ಅಡುಗೆಕೋಣೆಯ ಸ್ವಚ್ಛತೆಯ ಬಗ್ಗೆ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ವಿದ್ಯಾರ್ಥಿಗಳೊಂದಿಗೆ ಆಹಾರವನ್ನು ಸೇವಿಸಿದರು. ಬಡಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರದಿಂದ ನೀಡುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಸರ್ಕಾರದಿಂದ ನೀಡಲಾಗುವ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾಗರಾಜ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹೆಚ್.ಇ.ಅಜ್ಜಪ್ಪ, ಶಿವಮೊಗ್ಗ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಅವಿನಾಶ್.ಸಿ, ಶಿವಮೊಗ್ಗ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಮಲ್ಲೇಶಪ್ಪ, ವಿದ್ಯಾರ್ಥಿನಿಲಯದ ವಾರ್ಡನ್ ಕೊಟ್ರೇಶ್‍ಹಾಜರಿದ್ದರು.