ಈ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 7.4 ರಷ್ಟು ಬೆಳವಣಿಗೆ ಸಾಧಿಸಲಿದೆ ಮತ್ತು ಮುಂದಿನ ಹಣಕಾಸು ವರ್ಷದಲ್ಲೂ ಇದೇ ಬೆಳವಣಿಗೆ ಮುಂದುವರಿಯಲಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಎಫ್‌ಇ ಬೆಸ್ಟ್ ಬ್ಯಾಂಕ್ಸ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು,
ಅಂತಾರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವಬ್ಯಾಂಕ್ ಮುಂದಿನ ಎರಡು ಆರ್ಥಿಕ ವರ್ಷಗಳಲ್ಲಿ ಭಾರತದ ಬೆಳವಣಿಗೆಯು ಅತ್ಯಂತ ವೇಗವಾಗಿರಲಿದೆ ಎಂದು ಅಂದಾಜಿಸಿವೆ. ಅವರ ಅಂದಾಜುಗಳು ಭಾರತೀಯ ರಿಸರ್ವ್ ಬ್ಯಾಂಕ್ ಜೊತೆಗೆ ಹೊಂದಾಣಿಯಾಗುತ್ತಿದೆ ಎಂದು ಹೇಳಿದ್ದಾರೆ.
ಜಾಗತಿಕ ಪರಿಸ್ಥಿತಿಯು ಸವಾಲಿನಿಂದ ಕೂಡಿದೆ. ಜಾಗತಿಕ ಬೆಳವಣಿಗೆ ಕುಂಠಿತವಾಗುವುದರಿಂದ ರಫ್ತು ವಲಯವು ತೊಂದರೆಗಳನ್ನು ಎದುರಿಸಲಿದೆ. ಹೀಗಾಗಿ ಸರ್ಕಾರ ಅಂತಹ ಘಟಕಗಳೊಂದಿಗೆ ಕೆಲಸ ಮಾಡುತ್ತದೆ ಎಂದು ಕೇಂದ್ರ ಸಚಿವೆ ತಿಳಿಸಿದ್ದಾರೆ.
ಅಭಿವೃದ್ಧಿಯ ಆಧಾರದ ಮೇಲೆ ನಮ್ಮ ಸ್ವಂತ ಅಂದಾಜುಗಳು ಈ ಬೆಳವಣಿಗೆಯನ್ನು ತೋರಿಸಿವೆ. ನಾವು ಖಂಡಿತವಾಗಿಯೂ ಶೇ. 7.4 ಅಭಿವೃದ್ಧಿ ಸಾಧಿಸುತ್ತೇವೆ ಮತ್ತು ಮುಂದಿನ ವರ್ಷವೂ ಇದು ಮುಂದುವರಿಯುತ್ತದೆ ಎಂದು ತಿಳಿಸಿದರು.