Sunday, November 24, 2024
Sunday, November 24, 2024

ಶೇ 60 ರಷ್ಟು ಸಿರಿಧಾನ್ಯ ಬೆಳೆಯುವ ಪ್ರದೇಶ ತಗ್ಗಿರುವುದು ಆತಂಕಕಾರಿ- ನಿರ್ಮಲಾ ಸೀತಾರಾಮನ್

Date:

ವಿಶ್ವಸಂಸ್ಥೆಯು 2023ನೇ ವರ್ಷವನ್ನು ‘ಸಿರಿಧಾನ್ಯಗಳ ವರ್ಷ’ವೆಂದು ಘೋಷಿಸಿದೆ. ಭಾರತದಲ್ಲಿ ಸಿರಿಧಾನ್ಯಗಳ ವರ್ಷ ಅಭಿಯಾನವು ರಾಯಚೂರಿನಿಂದ ಪ್ರಾರಂಭವಾಗುತ್ತಿರುವುದು ವಿಶೇಷವಾಗಿದೆ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎನ್‌.ಕಟ್ಟಿಮನಿ ಹೇಳಿದರು.

ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಸಿರಿಧಾನ್ಯಗಳ ಸಮಾವೇಶ-2022’ವನ್ನು ಗೋ ಪೂಜೆಯೊಂದಿಗೆ ಉದ್ಘಾಟನೆ ನೆರವೇರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಶ್ವದ 63 ದೇಶಗಳು ಒಪ್ಪಿಕೊಂಡ ಬಳಿಕ ಸಿರಿಧಾನ್ಯಗಳ ವರ್ಷವೆಂದು ಘೋಷಿಸಲಾಗಿದೆ. ಅದರಲ್ಲಿ ಭಾರತವೂ ಒಂದಾಗಿದ್ದು, ಸಿರಿಧಾನ್ಯಗಳನ್ನು ಬೆಳೆಯುವುದಕ್ಕೆ ಪ್ರೋತ್ಸಾಹ ನೀಡಲು ಈ ಎಲ್ಲ ದೇಶಗಳು ಸಮ್ಮತಿಸಿವೆ. ಈ ಮೂಲಕ ದೇಶದಲ್ಲಿ ಅಪೌಷ್ಟಿಕತೆ ಹೊಗಲಾಡಿಸಿ, ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳು ಕಾಫಿಗೆ ಫೇಮಸ್ ಆದಂತೆ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳು ಸಿರಿಧಾನ್ಯಕ್ಕೆ ಹೆಸರಾಗಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರೆ ನೀಡಿದರು.

ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮೇಳೆ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಸಿರಿಧಾನ್ಯಗಳು ಬೆಳೆಯುವ ಪ್ರದೇಶ ಕಡಿಮೆಯಾಗುತ್ತಿದೆ. ಸಿರಿಧಾನ್ಯ ಬೆಳೆಯಲು ಉತ್ತೇಜನ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ 2023ನೇ ವರ್ಷವನ್ನು ಸಿರಿಧಾನ್ಯ ವರ್ಷ ಎಂದು ಘೋಷಣೆ ಮಾಡಲಾಗಿದೆ. ಸಿರಿಧಾನ್ಯಗಳ ಮೇಳಗಳು, ಸಮಾವೇಶಗಳನ್ನು ಆಯೋಜಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಸಿರಿಧಾನ್ಯ ಸಮಾವೇಶದಲ್ಲಿ ಕೈಗೊಳ್ಳುವಂತಹ ತಿರ್ಮಾನಗಳನ್ನು ಅನುಷ್ಟಾನಗೊಳಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದರು.

ದೇಶದ ಅನೇಕ ರಾಜ್ಯಗಳಲ್ಲಿ ಸಿರಿಧಾನ್ಯ ಬೆಳೆಯಲಾಗುತ್ತಿದೆ. ಸ್ಟಾರ್ಟ ಅಪ್​ಗಳು ಎಫ್​ಪಿಒಗಳೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ. ಶೇ.60ರಷ್ಟು ಸಿರಿಧಾನ್ಯ ಬೆಳೆಯುವ ಪ್ರದೇಶ ತಗ್ಗಿರುವುದು ಆತಂಕಕಾರಿ ವಿಷಯ. ಇದನ್ನು ಪುನಃ ಪ್ರೋತ್ಸಾಹಿಸಲು ಸಾವಿರಾರು ಕೋಟಿ ರೂಪಾಯಿಯನ್ನು ವಿನಿಯೋಗಿಸುವ ಮೂಲಕ ಮತ್ತೆ ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹಿಸಲಾಗಿದೆ. ಇದು ಸವಾಲಾಗಿದೆ ಎಂದರು.

2018ರಲ್ಲೇ ದೇಶದಲ್ಲಿ ಸಿರಿಧಾನ್ಯ ಕಾರ್ಯಕ್ರಮ ಆಚರಿಸಲಾಗಿತ್ತು. ನಂತರ ವಿಶ್ವಮಟ್ಟದಲ್ಲಿ ಅದನ್ನು ಕೊಂಡೊಯ್ಯುವ ಕಾರ್ಯಕ್ಕೆ ಕೇಂದ್ರ ಮುಂದಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ಇಂದು ವಿಶ್ವಮಟ್ಟದಲ್ಲಿ ಸಿರಿಧಾನ್ಯಗಳ ಬಗ್ಗೆ ಚರ್ಚೆ ಆರಂಭವಾಗಿದೆ. ಕರ್ನಾಟಕ ಸಿರಿಧಾನ್ಯ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಅತಿ ಹೆಚ್ಚು ಸಿರಿಧಾನ್ಯ ರಫ್ತು ಮಾಡುವಲ್ಲಿ ದೇಶ ಐದನೇ ಸ್ಥಾನದಲ್ಲಿದೆ ಎಂದರು.

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಪರಿಣಾಮದಿಂದಾಗಿ ಜಾಗಕತಿಕ ಮಟ್ಟದಲ್ಲಿ ಆಹಾರದ ಮೇಲೆ ಗಂಭೀರ ಪರಿಣಾಮ ಬೀರಿದೆ. ಕೇವಲ ಆಹಾರೋತ್ಪಾದನೆಯಿಂದ ಉಪಯೋಗವಿಲ್ಲ. ಪೌಷ್ಟಿಕಾಹಾರ ಉತ್ಪಾದನೆ ಈಗಿನ ಗುರಿಯಾಗಿದೆ. ಸಿರಿಧಾನ್ಯದಿಂದ ಮಾತ್ರ ಪೌಷ್ಟಿಕಾಂಶ ಬೆಳೆ ಬೆಳೆಯಲು ಸಾಧ್ಯ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...