ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ತಡರಾತ್ರಿ ಆದೇಶ ಹೊರಡಿಸಿದೆ.
ಈ ಮೂಲಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಆದೇಶವನ್ನು ಹೈಕೋಟ್ ಎತ್ತಿಹಿಡಿದಿದೆ.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿ ಚಾಮರಾಜಪೇಟೆ ಈದ್ಗಾ ಮೈದಾನದ ಸುಪ್ರೀಂಕೋರ್ಟ್ ಆದೇಶ ಆಧರಿಸಿ ವಿಚಾರಣೆಗೆ ಅರ್ಜಿದಾರರು ಸಲ್ಲಿಸಿದ ಮನವಿ ಮೇರೆಗೆ ರಾತ್ರಿ 10 ಗಂಟೆಗೆ ಅರ್ಜಿ ವಿಚಾರಣೆ ನಡೆಸಲಾಯಿತು.
ನ್ಯಾಯಮೂರ್ತಿ ಅಶೋಕ್.ಎಸ್ ಕಿಣಗಿಯವರ ಕಚೇರಿಯಲ್ಲಿ ಅರ್ಜಿ ವಿಚಾರಣೆ ನಡೆಯಿತು. ವಾದ ವಿವಾದ ಆಲಿಸಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಸಮ್ಮತಿ ನೀಡಿದೆ.
ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಸಂಬಂಧಪಟ್ಟಂತೆ ಆದೇಶ ನೀಡಿದ್ದ ಸುಪ್ರೀಂಕೋರ್ಟ್ ಗಣೇಶ ಉತ್ಸವಕ್ಕೆ ಅನುಮತಿಯನ್ನು ನಿರಾಕರಿಸಿತ್ತು. ಬುಧವಾರ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಮಹತ್ವ ಪಡೆದುಕೊಂಡಿತ್ತು.
