Sunday, December 7, 2025
Sunday, December 7, 2025

ಜನ ಸಾಮಾನ್ಯರಿಗೆ ಆರೋಗ್ಯದ ಅರಿವು ಮೂಡಿಸಿ- ಕೂರ್ಮಾರಾವ್

Date:

ಜನ ಸಾಮಾನ್ಯರಿಗೆ ಆರೋಗ್ಯ, ಶಿಕ್ಷಣದ ಬಗ್ಗೆ ಅರಿವು ಮೂಡಿಸಿದರೆ ರೋಗಗಳ ಬಗ್ಗೆ ಮುಂಜಾಗ್ರತೆವಹಿಸಲು ಸಾದ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಸೂಚಿಸಿದರು.

ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ರೋಗಗಳ ಹರಡುವಿಕೆ, ಲಕ್ಷಣ, ಮುಂಜಾಗ್ರತಾ ಕ್ರಮ, ಚಿಕಿತ್ಸೆಯ ಬಗ್ಗೆ ಮಾಹಿತಿ ಹೊಂದಿರಬೇಕು.

ಇದರಿಂದ, ಸಾಂಕ್ರಾಮಿಕ ರೋಗಗಳು ಹರಡುವುದನ್ನು ನಿಯಂತ್ರಿಸಬಹುದು ಎಂದರು.

ಸಾಮಾನ್ಯವಾಗಿ ಸಾಂಕ್ರಾಮಿಕ ರೋಗಗಳು ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ರೋಗವಾಹಕಗಳಾದ ಸೊಳ್ಳೆ ಸೇರಿದಂತೆ ಇತರ ಕೀಟಗಳ ಹತೋಟಿಯ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಯೋಜನೆ ರೂಪಿಸಿ ತಿಂಗಳವಾರು ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಕಡಿಮೆಯಾಗುತ್ತಿದೆ. 2028ರೊಳಗೆ ಜಿಲ್ಲೆ ಮಲೇರಿಯ ಮುಕ್ತವಾಗಬೇಕು. ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದೆ. ಹತೋಟಿಗೆ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ಸಹಕಾರ ಅಗತ್ಯ ಎಂದರು.

ಬಾಣಂತಿಯರಿಗೆ ಆರಂಭದಲ್ಲಿಯೇ ತಾಯಿ ಕಾರ್ಡ್‌ಗಳನ್ನು ನೀಡಿ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಮಾಡಬೇಕು. ಪೌಷ್ಟಿಕ ಆಹಾರ ಸೇವನೆಗೆ ಮಾಹಿತಿ ನೀಡಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮತುವರ್ಜಿ ವಹಿಸಿ ಕೆಲಸ ಮಾಡಿದರೆ ಶಿಶು ಹಾಗೂ ತಾಯಿ ಮರಣ ಪ್ರಮಾಣ ಕಡಿಮೆಗೊಳಿಸಬಹುದು ಎಂದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 217 ಹಂದಿ ಜ್ವರ ಪ್ರಕರಣಗಳು ಕಂಡುಬಂದಿದ್ದು ಒಬ್ಬರು ಸಾವನ್ನಪ್ಪಿದ್ದಾರೆ. ಮಂಕಿ ಫಾಕ್ಸ್ ಪ್ರಕರಣ ಸಂಬಂಧ 21 ಶಂಕಿತರ ನಿಗಾವಹಿಸಲಾಗಿದೆ. ಯಾರಲ್ಲೂ ಸೋಂಕು ಪತ್ತೆಯಗಿಲ್ಲ. ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆಗೆ ಬರುವ ಜಿಲ್ಲೆಯ ರೋಗಿಗಳಿಗೆ ಶೇ. 50ರಷ್ಟು ಹಾಸಿಗೆ ಮೀಸಲಿಡಲು ಖಾಸಗಿ ಆರೋಗ್ಯ ಸಂಸ್ಥೆಗಳು ಮುಂದಾಗಬೇಕು ಎಂದು ಸೂಚನೆ ನೀಡಿದರು.

ಕ್ಷಯ ರೋಗ ನಿಯಂತ್ರಣಕ್ಕೆ ಹೆಚ್ಚು ಪರೀಕ್ಷೆ ಮಾಡಿ, ಸಂಭಾವ್ಯ ಕ್ಷಯರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಇದರಿಂದ ಕ್ಷಯ ಹರಡುವುದನ್ನು ತಡೆಯಬಹುದು. ಜಿಲ್ಲೆಯಲ್ಲಿ ಪ್ರಸ್ತುತ 9,540 ಜನರಿಗೆ ಕ್ಷಯ ಪರೀಕ್ಷೆ ನಡೆಸಲಾಗಿದೆ. 703 ಮಂದಿಯಲ್ಲಿ ರೋಗ ಪತ್ತೆಯಾಗಿದೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ತಂಬಾಕು ಮುಕ್ತ ಗ್ರಾಮವಾಗಿ ಘೋಷಿಸಲಾಗಿರುವ ಕೋಡಿಬೆಂಗ್ರೆ ಗ್ರಾಮದ ಗ್ರಾಮಸ್ಥರಿಗೆ ಪ್ರಶಂಸನೀಯ ಪ್ರಮಾಣಪತ್ರ ನೀಡಲಾಯಿತು. ಇತರೆ ಗ್ರಾಮಗಳನ್ನು ತಂಬಾಕು ಹಾಗೂ ಮದ್ಯಮುಕ್ತಗೊಳಿಸಲು ಮುಂದಾಗಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಪ್ರಸನ್ನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...