ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆ ಆಗಿದೆ. ಕಳೆದ 24 ಗಂಟೆಗಳಲ್ಲಿ 5,554 ಹೊಸ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
2020 ರ ಆರಂಭದಲ್ಲಿ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 48,850 ಕ್ಕೆ ಇಳಿದಿದೆ. ದೈನಂದಿನ ಪಾಸಿಟಿವಿಟಿ ದರವು ಶೇ. 1.47 ಹಾಗೂ ಸಾಪ್ತಾಹಿಕ ಪಾಸಿಟಿವಿಟಿ ದರವು ಶೇ. 1.80 ದಾಖಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ ಒಟ್ಟು 3,76,855 ಪರೀಕ್ಷೆಗಳನ್ನು ನಡೆಸಲಾಗಿದೆ. ಇದುವರೆಗೆ ನಡೆಸಲಾದ ಒಟ್ಟು ಪರೀಕ್ಷೆಗಳ ಸಂಖ್ಯೆ 88.90 ಕೋಟಿ.24 ಗಂಟೆಗಳ ಅವಧಿಯಲ್ಲಿ 6,322 ಚೇತರಿಕೆಗಳು ದಾಖಲಾಗಿದೆ. ಸಂಚಿತ ಚೇತರಿಕೆಯ ಸಂಖ್ಯೆ 4,39,13,294 ಕ್ಕೆ ತಲುಪಿದೆ. ಪ್ರಸ್ತುತ ಚೇತರಿಕೆ ದರವು ಶೇ. 98.7 ರಷ್ಟಿದೆ.