Friday, December 5, 2025
Friday, December 5, 2025

ಉಕ್ರೇನ್ ಅಧ್ಯಕ್ಷ ಕಾರು ಅಪಘಾತದಿಂದ ಪಾರು

Date:

ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಪ್ರಾರಂಭವಾಗಿ 7 ತಿಂಗಳುಗಳೇ ಕಳೆದಿವೆ. ಕಳೆದ ಫೆಬ್ರುವರಿಯಿಂದ ಶುರುವಾದ ಯುದ್ಧ ಇನ್ನೂ ನಿಂತಿಲ್ಲ. ಯುದ್ಧದಲ್ಲಿ ಉಕ್ರೇನ್​ಗೆ ಅಪಾರ ಪ್ರಮಾಣದ ಹಾನಿ ಅನುಭವಿಸಿದ್ದರೂ ಅಧ್ಯಕ್ಷ ವೊಲೊದಿಮಿರ್ ಝೆಲೆನ್​ಸ್ಕಿ ಮಾತ್ರ ಧೈರ್ಯದಿಂದ ಮುನ್ನುಗ್ಗುತ್ತಲೇ ಇದ್ದಾರೆ.

ಆದರೆ, ಇದರ ನಡುವೆಯೇ ಉಕ್ರೇನ್​ ಅಧ್ಯಕ್ಷ ವೊಲೊದಿಮಿರ್ ಝೆಲೆನ್​ಸ್ಕಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಇಂದು ನಡೆದಿದೆ.

ವೊಲೊದಿಮಿರ್ ಝೆಲೆನ್​ಸ್ಕಿ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅದೃಷ್ಟವಶಾತ್​ ವೊಲೊದಿಮಿರ್ ಅಲ್ಪದಲ್ಲಿಯೇ ಪಾರಾಗಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಯುದ್ಧಭೂಮಿಗೆ ಭೇಟಿ ನೀಡಿದ ನಂತರ ಹಿಂದಿರುವ ವೇಳೆಯಲ್ಲಿ ಈ ಘಟನೆ ನಡೆದಿದೆ. ವೊಲೊಡಿಮಿರ್ ಅವರ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆದರೆ ಜೀವಕ್ಕೇನು ಅಪಾಯವಿಲ್ಲ ಎಂದು ಅವರ ವಕ್ತಾರರು ತಿಳಿಸಿದ್ದಾರೆ. ಇವರ ಕಾರು ಚಾಲಕನಿಗೆ ಸಹ ಗಾಯಗಳಾಗಿದೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಕೂಲಂಕಷವಾಗಿ ತನಿಖೆ ಪ್ರಾರಂಭಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...