ಎಸ್ಸಿ, ಎಸ್ಟಿಗೆ ಮೀಸಲಾತಿ ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿನ್ನೆಲೆಯಲ್ಲಿ ಬರೋಬ್ಬರಿ 241 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ ವಾಲ್ಮೀಕಿ ಸ್ವಾಮೀಜಿಗಳು ಧರಣಿಯನ್ನ ಕೈಬಿಟ್ಟಿದ್ದಾರೆ.
ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕ ಬೆನ್ನಲ್ಲೇ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದ ಪ್ರತಿಭಟನೆಯು ಸ್ಥಗಿತಗೊಂಡಿದೆ.
241 ದಿನಗಳಿಂದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಗಳು ಪ್ರತಿಭಟನೆ ನಡೆಸಿದ್ದರು.
ನಂತರ ವಾಲ್ಮೀಕಿ ಸಮಾಜದ ಮುಖಂಡರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನ ಭೇಟಿಯಾಗಿ ಅಭಿನಂದಿಸಿದರು.
ಈ ವೇಳೆ ಮುಖ್ಯಮಂತ್ರಿಗಳಿಗೆ ಸ್ವಾಮೀಜಿ ಸಿಹಿ ತಿನ್ನಿಸಿ ಖುಷಿಪಟ್ಟರು.