Thursday, June 25, 2026
Thursday, June 25, 2026

ದಲಿತರಿಗೆ ಸಾಮಾಜಿಕ ಸ್ವಾತಂತ್ರ್ಯ ಸೇರಿದರೆ ಅರ್ಥಪೂರ್ಣ

Date:

ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಕೇವಲ ಕಾನೂನು ತಂದರೆ ಸಾಲದು. ಅವರ ಉನ್ನತಿ ಖಾತ್ರಿಪಡಿಸಿಕೊಳ್ಳಲು ಜನರ ಮನಸ್ಥಿತಿ ಬದಲಾಗಬೇಕಿದೆ ಎಂದು ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಪ್ರತಿಪಾದಿಸಿದರು.

ಕಾನ್ಪುರದ ನಾನಾರಾವ್‌ ಪಾರ್ಕ್‌ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಲೂ ವಾಲ್ಮೀಕಿ ಸಮುದಾಯ ಬಹಳ ಹಿಂದುಳಿದಿದೆ.

ಸಮುದಾಯದ ಅಭಿವೃದ್ಧಿಗೆ ಸಂವಿಧಾನದಲ್ಲಿ ನಿಬಂಧನೆಗಳನ್ನು ಮಾಡಲಾಗಿದೆ. ಆದರೆ ಇದಕ್ಕಿಂತ ಮಿಗಿಲಾಗಿ ಜನರಲ್ಲಿ ಒಳಗೊಳ್ಳುವಿಕೆ ಭಾವನೆ ಮೂಡಬೇಕಿದೆ, ಎಂದರು.

ದಲಿತರ ಉದ್ಧಾರಕ್ಕಾಗಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಅನೇಕ ನಿಬಂಧನೆಗಳನ್ನು ತಂದರು. ಇದರಿಂದ ಎಲ್ಲರೊಂದಿಗೆ ಸಮನಾಗಿ ದಲಿತರು ಕೂರಬಹುದು. ಅವರಿಗೆ ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ನೀಡಲಾಗಿದೆ ಎಂದು ಅಂಬೇಡ್ಕರ್‌ ಹೇಳಿದರು. ಆದರೆ ಇದರೊಂದಿಗೆ ಸಾಮಾಜಿಕ ಸ್ವಾತಂತ್ರ್ಯ ಸೇರಿದರೆ ಹೆಚ್ಚು ಅರ್ಥಪೂರ್ಣ. ಕೇವಲ ಕಾನೂನುಗಳು ಸಾಲದು. ನಮ್ಮ ಜನರಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕಿದೆ. ಅವರ ಮನಸ್ಥಿತಿಯನ್ನು ಬದಲಿಸಬೇಕಿದೆ, ಎಂದು ಭಾಗವತ್‌ ಪ್ರತಿಪಾದಿಸಿದರು.

ದಲಿತ ಸಮುದಾಯಕ್ಕೆ ಸಾಮಾಜಿಕ ಸ್ವಾತಂತ್ರ್ಯ ದೊರಕಿಸಲು ಮತ್ತು ಸಾಮಾಜಿಕ ಸಾಮರಸ್ಯ ಹಾಗೂ ಒಳಗೊಳ್ಳುವಿಕೆ ಭಾವನೆ ಮೂಡಿಸಲು ಮತ್ತೂಬ್ಬ ಡಾ. ಸಾಹೇಬ್ ಶ್ರಮಿಸಿದರು, ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...