ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ.
ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಅಭಯ್ ಎಸ್ ಓಕಾ ಅವರ ಪೀಠವು ಈ ಸಮಸ್ಯೆಯಿಂದ ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ.
ಈ ಅರ್ಜಿಯ ವಿಚಾರಣೆ ನಡೆಸುವುದು ನ್ಯಾಯಾಲಯದ ಕೆಲಸವೇ? ನೀವು ಏಕೆ ಇಂತಹ ಅರ್ಜಿಗಳನ್ನು ಸಲ್ಲಿಸುತ್ತೀರಿ? ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.
ಹಸು ರಾಷ್ಟ್ರೀಯ ಪ್ರಾಣಿ ಆಗದೇ ಇರುವುದು ಯಾರ ಮತ್ತು ಯಾವ ಮೂಲಭೂತ ಹಕ್ಕನ್ನು ಉಲ್ಲಂಘಿಸಿದೆ? ಎಂದು ಸಹ ಕೋರ್ಟ್ ಪ್ರಶ್ನಿಸಿದೆ.
ನೀವು ನ್ಯಾಯಾಲಯಕ್ಕೆ ಬಂದ ಕಾರಣ ನಾವು ಕಾನೂನನ್ನು ಗಾಳಿಗೆ ತೂರಬೇಕೇ? ಎಂದು ಸುಪ್ರೀಂಕೋರ್ಟ್ ಅರ್ಜಿದಾರರನ್ನು ಪ್ರಶ್ನಿಸಿದೆ.
ಗೋವಂಶ್ ಸೇವಾ ಸದನ್ ಮತ್ತು ಇತರರು ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದರು.
ಸದ್ಯ ಅರ್ಜಿದಾರರು ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂಬ ಅರ್ಜಿಯನ್ನು ಹಿಂತೆಗೆದುಕೊಂಡಿದ್ದಾರೆ.