Friday, March 20, 2026
Friday, March 20, 2026

ಐದು ಸೆಮಿ ಕಂಡಕ್ಟರ್ ಘಟಕ ಸ್ಥಾಪನೆಗೆ ಕೇಂದ್ರದ ಸಮ್ಮತಿ- ರಾಜೀವ್ ಚಂದ್ರಶೇಖರ್

Date:

ಐದು ಕಂಪೆನಿಗಳ 1.53 ಲಕ್ಷ ಕೋಟಿ ರು. ಮೊತ್ತದ ಸೆಮಿ ಕಂಡಕ್ಟರ್‌ ಘಟಕ ಸ್ಥಾಪನೆ ಪ್ರಸ್ತಾವನೆಗಳಿಗೆ ಎರಡು ತಿಂಗಳೊಳಗೆ ಕೇಂದ್ರ ಸರ್ಕಾರವು ಸಮ್ಮತಿ ಸೂಚಿಸಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌, ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದರು.

ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಇಂಡಿಯಾ ಎಲೆಕ್ಟ್ರಾನಿಕ್ಸ್‌ ಅಂಡ್‌ ಸೆಮಿ ಕಂಡಕ್ಟರ್‌ ಅಸೋಸಿಯೇಷನ್‌(ಐಇಎಸ್‌ಎ) ಹಮ್ಮಿಕೊಳ್ಳಲಾಗಿದ್ದ ‘ವಿಷನ್‌ ಸಮ್ಮಿಟ್‌’ನಲ್ಲಿ ವರ್ಚುವಲ್‌ ಮೂಲಕ ಪಾಲ್ಗೊಂಡು ಮಾತನಾಡಿದ ಅವರು, ವೇದಾಂತ, ಫೆಕ್ಸ್‌ಕಾನ್‌ ಜೆವಿ, ಐಜಿಎಸ್‌ಎಸ್‌, ವೆಂಚರ್ಸ್‌, ಐಎಸ್‌ಎಂಸಿ ಕಂಪೆನಿಗಳು ಎಲೆಕ್ಟ್ರಾನಿಕ್‌ ಚಿಪ್‌ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿದ್ದು 1.53 ಲಕ್ಷ ಕೋಟಿ ರು. ಹೂಡಿಕೆ ಮಾಡಲಿವೆ.

ಕಂಪೆನಿಗಳ ಪ್ರಸ್ತಾವನೆಯನ್ನು ಪರಿಶೀಲಿಸಿ ಒಪ್ಪಿಗೆ ಸೂಚಿಸಲಿದ್ದು ಹೂಡಿಕೆ ಪ್ರಾರಂಭಿಸಲಿವೆ. ಗುಜರಾತ್‌ ಮತ್ತು ಕರ್ನಾಟಕ ಸರ್ಕಾರಗಳು ಅಭಿವೃದ್ಧಿ ದೃಷ್ಟಿಯಿಂದ ಬಂಡವಾಳ ಆಕರ್ಷಣೆಗೆ ಒತ್ತು ನೀಡಿವೆ. ಇದರಿಂದಾಗಿ ಉದ್ಯೋಗ ಸೃಷ್ಟಿ, ಹೂಡಿಕೆ, ಸಂಶೋಧನೆ, ರಾಜ್ಯಗಳ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ಬಣ್ಣಿಸಿದರು.

ಕೇಂದ್ರ ಸರ್ಕಾರವು 5 ಕಂಪೆನಿಗಳ 1.53 ಲಕ್ಷ ಕೋಟಿ ರು. ಮೊತ್ತದ ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಯ ಪ್ರಸ್ತಾವನೆಗಳಿಗೆ 30 ರಿಂದ 60 ದಿನದೊಳಗೆ ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ. ಇದರಿಂದಾಗಿ ಎಲೆಕ್ಟ್ರಾನಿಕ್‌ ಚಿಪ್‌ ಮತ್ತು ಡಿಸ್‌ಪ್ಲೇ ತಯಾರಿಕಾ ಘಟಕಗಳ ಸ್ಥಾಪನೆಯಾಗಲಿವೆ.

ಕಳೆದ ಎಂಟರಿಂದ ಒಂಬತ್ತು ತಿಂಗಳಲ್ಲಿ ದೇಶದ ಸೆಮಿ ಕಂಡಕ್ಟರ್‌ ಉತ್ಪಾದನಾ ವಲಯದಲ್ಲಿ ಭಾರೀ ಪ್ರಗತಿ ಕಂಡು ಬಂದಿದೆ ಎಂದು ಅಭಿಪ್ರಾಯಪಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...