ನಿಯತ್ತಿಗೆ ಇನ್ನೊಂದು ಹೆಸರೇ ನಾಯಿ. ಈಗ ಹೇಳು ಹೊರಟಿರುವ ವಿಷಯವು ಕೂಡ ಇದಕ್ಕೆ ಸಂಬಂಧಿಸಿದ್ದೆ…
ಇದೊಂದು ಮನ ಮಿಡಿಯುವ ವಿಷಯ.
ಕಟ್ಟಿಗೆ ತರಲು ಕಾಡಿಗೆ ಹೋದ ವ್ಯಕ್ತಿಯೊಬ್ಬ ನಿರ್ಜನ ಪ್ರದೇಶದಲ್ಲಿ ತಲೆ ಸುತ್ತಿ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ತನ್ನ ಸಾಕು ನಾಯಿಯಿಂದ ಈತ ಪತ್ತೆಯಾಗಿದ್ದಾನೆ.
ಈ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡೂರಿನಲ್ಲಿ ನಡೆದಿದೆ.
ಈ ಊರಿನ ಶೇಖರಪ್ಪ ಎಂಬಾತ ಆಯನೂರಿನ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ. ಬೆಳಗ್ಗೆ ಸುಮಾರು 6 ಗಂಟೆಗೆ ಕಟ್ಟಿಗೆ ತರುವುದಕ್ಕೆ ಕಾಡಿಗೆ ಹೋಗಿದ್ದಾರೆ. ಸುಮಾರು 10 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದವರು ಎಷ್ಟೊತ್ತಾದರೂ ಮನೆಗೆ ಬಂದಿಲ್ಲ. ಆದ್ದರಿಂದ, ಮನೆಯವರು ಊರಿನ ಒಂದಿಷ್ಟು ಜನರಿಗೆ ವಿಚಾರ ತಿಳಿಸಿದ್ದಾರೆ. ಊರಿನವರು ಈತನನ್ನು ಹುಡುಕಲು ಕಾಡಿಗೆ ಹೋಗಿದ್ದಾರೆ. ಕಾಡಿನಲ್ಲಿ ಎಷ್ಟು ಹುಡುಕಿದರು ಶೇಖರಪ್ಪನ ಸುಳಿವು ಸಿಗಲೇ ಇಲ್ಲ.
ಆದರೆ, ಈತ ಸಾಕಿದ್ದ ನಾಯಿಯೊಂದು ಶೇಖರಪ್ಪ ಇರುವ ಜಾಗ ಪತ್ತೆ ಹಚ್ಚಿದೆ. ಸುಮಾರು 4 ಗಂಟೆ ಸುಮಾರಿಗೆ ಶೇಖರಪ್ಪ ಇರುವ ಜಾಗಕ್ಕೆ ಊರಿನವರನ್ನು ಕರೆ ತಂದಿದೆ.
ತಕ್ಷಣವೇ ಶೇಖರಪ್ಪನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಈ ನಾಯಿ ಪ್ರತಿನಿತ್ಯ ಮಾಲೀಕನ ಜೊತೆಯಲ್ಲಿ ಹೋಗುತ್ತಿತ್ತಂತೆ. ಹಾಗಾಗಿಯೇ ಶೇಖರಪ್ಪನನ್ನು ಪತ್ತೆ ಮಾಡಿದೆ ಎನ್ನಲಾಗಿದೆ.