Wednesday, December 17, 2025
Wednesday, December 17, 2025

ಫೌಂಡ್ರಿ ಉದ್ಯಮದಲ್ಲಿ ಹೊಸ ತಂತ್ರಜ್ಞಾನ ಬಳಸಬೇಕು-ಶಾಸಕ ರುದ್ರೇಗೇಡ

Date:

ಫೌಂಡ್ರಿ ಉದ್ಯಮದಲ್ಲಿ ಹೊಸ ತಂತ್ರಜ್ಞಾನವನ್ನು ಹೆಚ್ಚು ಬಳಸಿಕೊಂಡು ಉತ್ಪಾದನಾ ಪ್ರಮಾಣ ಹೆಚ್ಚಿಸುವತ್ತ ಗಮನ ಹರಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ, ಶಾಂತಲಾ ಸಮೂಹ ಸಂಸ್ಥೆ ಚೇರ‍್ಮನ್ ಎಸ್.ರುದ್ರೇಗೌಡ ಹೇಳಿದರು.

ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ಶಿವಮೊಗ್ಗ ಘಟಕದ ದಶಮಾನೋತ್ಸವ ಕಾರ್ಯಕ್ರಮ ಪ್ರಯುಕ್ತ ನಗರದ ರಾಯಲ್ ಆರ್ಕಿಡ್‌ನಲ್ಲಿ ಆಯೋಜಿಸಿದ್ದ ಪ್ರಶಸ್ತಿ ವಿತರಣಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಎಂಬತ್ತರ ದಶಕದ ಆರಂಭದಲ್ಲಿನ ಫೌಂಡ್ರಿ ಉದ್ಯಮಕ್ಕೂ ಪ್ರಸ್ತುತ ಕಾಲಘಟ್ಟಕ್ಕೂ ಅಜಗಜಾಂತರ ವ್ಯತ್ಯಾಸ ಇದ್ದು, ಕಾಲ ಬದಲಾದಂತೆ ನಾವು ಕೆಲಸ ನಿರ್ವಹಿಸುತ್ತಿರುವ ಕ್ಷೇತ್ರದಲ್ಲೂ ತಂತ್ರಜ್ಞಾನದ ಪರಿಣಾಮಕಾರಿ ಬಳಕೆ ಮಾಡುವುದರ ಬಗ್ಗೆ ಆಲೋಚಿಸಬೇಕಿದೆ ಎಂದು ತಿಳಿಸಿದರು.

ಕೃಷಿ, ಆಟೋಮೊಬೈಲ್ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಫೌಂಡ್ರಿ ಉತ್ಪನ್ನಗಳ ಅಗತ್ಯತೆ ಇದ್ದು, ಫೌಂಡ್ರಿ ಕ್ಷೇತ್ರದ ಅವಶ್ಯಕತೆ ಹಾಗೂ ಅನಿವಾರ್ಯತೆ ಬಗ್ಗೆ ಹೆಚ್ಚಿನ ಚಿಂತನೆ ನಡೆಸಬೇಕು. ಹೊಸ ತಂತ್ರಜ್ಞಾನವನ್ನು ಕಾರ್ಯರೂಪಕ್ಕೆ ಅನುಷ್ಠಾನಗೊಳಿಸಬೇಕು. ಮಾನವ ಸಂಪನ್ಮೂಲದ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

ಐಐಎಫ್ ಉಪಾಧ್ಯಕ್ಷ ಡಿ.ಎಸ್.ಚಂದ್ರಶೇಖರ್ ಮಾತನಾಡಿ, ಫೌಂಡ್ರಿ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಐದು ಸಾವಿರಕ್ಕೂ ಅಧಿಕ ಕುಟುಂಬಗಳು ಅವಲಂಬಿತವಾಗಿದ್ದು, ಉದ್ಯೋಗ ಒದಗಿಸುವ ಕೆಲಸ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಫೌಂಡ್ರಿ ಉತ್ಪನ್ನಗಳು ವಿಶ್ವದ ಬಹುತೇಕ ರಾಷ್ಟ್ರಗಳಿಗೆ ರಫ್ತು ಆಗುವಲ್ಲಿ ಕಾರ್ಮಿಕರ ಶ್ರಮ ಅಪಾರ ಎಂದು ತಿಳಿಸಿದರು.

ಫೌಂಡ್ರಿ ಕಾರ್ಮಿಕರಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ಶಿವಮೊಗ್ಗ ಘಟಕದ ವತಿಯಿಂದ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಸಾಂಸ್ಕೃತಿಕ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಐಐಎಫ್ ದಕ್ಷಿಣ ವಲಯ ಚೇರ‍್ಮನ್ ಮುತ್ತುಕುಮಾರ್, ಐಐಎಫ್ ಖಜಾಂಚಿ ಎಸ್.ಕುಪ್ಪುಸ್ವಾಮಿ, ಐಐಎಫ್ ದಕ್ಷಿಣ ವಲಯ ಗೌರವ ಕಾರ್ಯದರ್ಶಿ ಡಿ.ಜಿ.ಬೆನಕಪ್ಪ, ಐಐಎಫ್ ಶಿವಮೊಗ್ಗ ಘಟಕದ ಅಧ್ಯಕ್ಷ ಟಿ.ಎನ್.ಪರಮಶೇಖರ್‌, ಐಐಎಫ್ ಶಿವಮೊಗ್ಗ ಘಟಕದ ಗೌರವ ಕಾರ್ಯದರ್ಶಿ ಎಂ.ವಿ.ರಾಘವೇಂದ್ರ, ಖಜಾಂಚಿ ರಾಘವೇಂದ್ರ ಹೆಬ್ಬಾರ್, ಐಐಎಫ್ ಶಿವಮೊಗ್ಗ ಘಟಕದ ನಿಕಟಪೂರ್ವ ಅಧ್ಯಕ್ಷ ಶ್ರೀನಾಥ್‌ ಗಿರಿಮಾಜಿ, ಶ್ರೀನಿವಾಸಮೂರ್ತಿ, ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ಕಿರಣ್‌ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...