ಜೆಡಿಎಸ್ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು.
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮಾಸ್ತಿ ಗ್ರಾಮಕ್ಕೆ ಭಾನುವಾರ ಜೆಡಿಎಸ್ನ ಪಂಚರತ್ನ ರಥಯಾತ್ರೆ ತಲುಪಿತು.
ರಥಯಾತ್ರೆಯ ದಾರಿಯುದ್ದಕ್ಕೆ ಎಚ್ಡಿಕೆ ಅವರ ಬಳಿ ರೈತ ಮಹಿಳೆಯರು, ಸ್ತ್ರೀ ಸಂಘಗಳ ಸದಸ್ಯರು ಸಾಲ ಮನ್ನ ಮಾಡುವಂತೆ ಕಷ್ಟ ಹೇಳಿಕೊಂಡಿದ್ದರು.
ಮಾಸ್ತಿ ಗ್ರಾಮದಲ್ಲಿ ಮಾತನಾಡಿದ ಎಚ್ಡಿಕೆ, 2018ರಲ್ಲಿ ಜೆಡಿಎಸ್ಗೆ ಬಹುಮತ ಸಿಕ್ಕಿ ಸರ್ಕಾರ ರಚಿಸಿದ್ದರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡುವ ಉದ್ದೇಶವಿತ್ತು. ಆಗ ಮೈತ್ರಿ ಸರ್ಕಾರದಲ್ಲಿ ರೈತರ 25 ಸಾವಿರ ಕೋಟಿ ರೂ. ಮನ್ನಾ ಮಾಡಿದ್ದೆವು. ಅದಾದ ಬಳಿಕ ಸ್ತ್ರೀಶಕ್ತಿ ಸಂಘಗಳ 1 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಲು ತೀರ್ಮಾನಿಸಿದ್ದೆ. ಅಷ್ಟರಲ್ಲಿ ಸರ್ಕಾರವನ್ನು ಕೆಡವಿದ್ದರಿಂದ ಸಾಲಮನ್ನಾ ಮಾಡಲಾಗಲಿಲ್ಲ. ಜೆಡಿಎಸ್ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುವುದು ಎಂದು ಘೋಷಿಸಿದರು.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಮಾಲೂರು ತಾಲೂಕಿನ ರಸ್ತೆಗಳ ಅಭಿವೃದ್ಧಿಗೆ 220 ಕೋಟಿ ರೂ. ಅನುದಾನ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.