ಚಿಲುಮೆ ಸಂಸ್ಥೆ ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹ ಮತ್ತು ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಕೇಸ್ಗೆ ಸಂಬಂಧಿಸಿದಂತೆ ಆರೋಪಿಗಳನ್ನ ಪೊಲೀಸ್ ಕಷ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಲ್ಲೇಶ್ವರಂನಲ್ಲಿರುವ ಚಿಲುಮೆ ಸಂಸ್ಥೆಯ ಕಚೇರಿ ಮೇಲೆ ದಾಳಿ ನಡೆದಿತ್ತು.
ದಾಳಿ ಬಳಿಕ ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್, ಆತನ ಸಹೋದರ ಕೆಂಪೇಗೌಡ ಹಾಗೂ ಯೋಜನಾಧಿಕಾರಿ ಪ್ರಜ್ವಲ್ ಅವರನ್ನು ಡಿಸೆಂಬರ್ 2ರ ತನಕ ಪೊಲೀಸ್ ಕಸ್ಟಡಿಯಲ್ಲಿ ಇರಿಸುವಂತೆ ಎಸಿಎಂಎಂ ನ್ಯಾಯಾಲಯದಿಂದ ಆದೇಶ ಬಂದಿದೆ.
ಇನ್ನು, ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲು ಹಲಸೂರು ಗೇಟ್ ಪೊಲೀಸರು ಮುಂದಾಗಿದ್ದಾರೆ.