Wednesday, December 17, 2025
Wednesday, December 17, 2025

ಉದ್ಯಮಗಲ್ಲಿ ಮಹಿಳೆಯರಿಗೆ ಪ್ರೋತ್ಸಾಹ ಅವಶ್ಯ- ಗೋಪಿನಾಥ್

Date:

ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರು ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಮತ್ತಷ್ಟು ಯಶಸ್ಸು ಸಾಧಿಸಲು ಪ್ರೋತ್ಸಾಹ ಅತ್ಯಂತ ಅಗತ್ಯ. ಶಿವಮೊಗ್ಗದ ಆರ್ಥಿಕ ಸ್ಥಿತಿ ಬಲಪಡಿಸುವಲ್ಲಿ ಮಹಿಳಾ ಉದ್ಯಮಿಗಳ ಕೊಡುಗೆಯು ಅಪಾರವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.

ನಗರದ ಕಂಟ್ರಿ ಕ್ಲಬ್ ಆವರಣದಲ್ಲಿ ಗೆಳತಿ ಸಂಘದ ವತಿಯಿಂದ ಆಯೋಜಿಸಿದ್ದ ಗೆಳತಿ ಮೇಳವನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸ್ವಂತ ಆಲೋಚನೆ ಹಾಗೂ ಸಾಮಾರ್ಥ್ಯದಿಂದ ಉದ್ಯಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಪ್ರೋತ್ಸಾಹ ಹಾಗೂ ಸ್ಫೂರ್ತಿ ಯಶಸ್ಸಿನ ಹಾದಿಯಲ್ಲಿ ನಡೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಮಹಿಳಾ ಉದ್ಯಮಿಗಳು ಒಟ್ಟುಗೂಡಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಅತ್ಯಂತ ಶ್ಲಾಘನೀಯ. ಎಲ್ಲ ಸಂಘ ಸಂಸ್ಥೆಗಳು ಮಹಿಳಾ ಉದ್ಯಮಿಗಳಿಗೆ ಸೂಕ್ತ ವೇದಿಕೆಗಳನ್ನು ಒದಗಿಸುವ ಕೆಲಸ ಮಾಡಬೇಕು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಮುಂದಿನ ದಿನಗಳಲ್ಲಿ ಆಯೋಜಿಸಲಿರುವ ಬೃಹತ್ ಮೇಳದಲ್ಲಿಯು ಗೆಳತಿ ಸಂಸ್ಥೆಯು ನಮ್ಮ ಜತೆ ಕೈಜೋಡಿಸಬೇಕು ಎಂದರು.

ಸ್ವೇಧ ಸಂಸ್ಥೆ ಅಧ್ಯಕ್ಷೆ ಲಕ್ಷ್ಮೀ ದೇವಿ ಗೋಪಿನಾಥ್ ಮಾತನಾಡಿ, ಮಹಿಳೆಯರು ಆರ್ಥಿಕ ಶಕ್ತಿ ಹೆಚ್ಚಿಸಿಕೊಳ್ಳಲು ಹಾಗೂ ಮನೋಬಲ ವೃದ್ಧಿಸಲು ಸಹಕಾರಿ ಆಗುವ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿರುವ ಕಾರ್ಯ ಅಭಿನಂದನೀಯ. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಸದಸ್ಯರು ಜತೆಗೂಡಿ ಬೃಹತ್ ಮೇಳಗಳನ್ನು ನಡೆಸುವಂತಾಗಲಿ ಎಂದು ಆಶಿಸಿದರು.

ಗೆಳತಿ ಸಂಘದ ಅಧ್ಯಕ್ಷೆ ಶಿಲ್ಪಾ ಗೋಪಿನಾಥ್ ಮಾತನಾಡಿ, ಕೆಲವೇ ಸದಸ್ಯರ ಮುಂದಾಳತ್ವದಲ್ಲಿ ಆರಭವಾದ ಗೆಳತಿ ಸಂಘವು ಪ್ರಸ್ತುತ 120ಕ್ಕೂ ಅಧಿಕ ಸದಸ್ಯರನ್ನು ಹೊಂದಿದ್ದು, ಪ್ರಸ್ತಕ ಸಾಲಿನಲ್ಲಿ ಎಲ್ಲ ಸದಸ್ಯರು ಒಟ್ಟುಗೂಡಿ ಚಿಕ್ಕದಾಗಿ ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಮೇಳ ಆಯೋಜಿಸುವ ಕಲ್ಪನೆ ಮೂಡಿತ್ತು.

ಆದರೆ ಎಲ್ಲರ ಸಹಕಾರ ಹಾಗೂ ಭಾಗವಹಿಸುವಿಕೆಯಿಂದ ಮೊದಲ ಬಾರಿಗೆ ಬೃಹತ್ ಮೇಳ ಆಯೋಜಿಸಲು ಸಾಧ್ಯವಾಯಿತು ಎಂದು ಹೇಳಿದರು.

ಗೆಳತಿ ಸಂಘದ ಸಂಸ್ಥಾಪಕ ಅಧ್ಯಕ್ಷೆ ಉಷಾಧಾರಾ ಭೂಪಾಳಂ ಮಾತನಾಡಿ, ಮನರಂಜನೆ, ಸರಳ ಕ್ವಿಜ್ ಕಾರ್ಯಕ್ರಮ ಸೇರಿದಂತೆ ವೈವಿಧ್ಯ ಚಟುವಟಿಕೆಗಳನ್ನು ಆಯೋಜಿಸಲು ಗೆಳತಿ ಆರಂಭವಾಗಿತ್ತು.

ಇದೀಗ ಗೆಳತಿ ಸಂಘವು ಮಹಿಳಾ ಉದ್ಯಮಿಗಳಿಗೆ ಅವಕಾಶ ಒದಗಿಸಲು ವಿಶೇಷ ಮೇಳ ಹಮ್ಮಿಕೊಂಡಿರುವುದು ಅಭಿನಂದನೀಯ ಎಂದು ತಿಳಿಸಿದರು.

ಕಂಟ್ರಿ ಕ್ಲಬ್ ಸಂಸ್ಥಾಪ ಅಧ್ಯಕ್ಷ ಶಶಿಧರ್ ಭೂಪಾಳಂ ಅವರು ಗೆಳತಿ ಮೇಳ ಆಯೋಜನೆಗೆ ಶುಭಕೋರಿ ಸಂತಸ ವ್ಯಕ್ತಪಡಿಸಿದರು. ಗೆಳತಿ ಸಂಘದ ಕಾರ್ಯದರ್ಶಿ ಶಬರಿ ಕಡಿದಾಳ್, ಖಜಾಂಚಿ ಸಿಂಧು ಭರತ್ ಭೂಪಾಳಂ, ಜಿ.ವಿಜಯ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...