ಕೋಲಾರದ ಕುಮಾರಿ ಸ್ಪೂರ್ತಿ ಸಂಸತ್ತಿನಲ್ಲಿ ಅಚ್ಚ ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಸ್ಫೂರ್ತಿ ಪ್ರಸ್ತುತ ಬೆಂಗಳೂರಿನ ಬಿಎಂಎಸ್ ಕಾನೂನು ಮಹಾವಿದ್ಯಾಲಯದ ಪ್ರಥಮ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದಾರೆ.
ಭಾರತ ಸರ್ಕಾರದ ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವಾಲಯ, ಪ್ರಜಾಪ್ರಭುತ್ವಕ್ಕಾಗಿ ಸಂಸದೀಯ ಸಂಶೋಧನಾ ಮತ್ತು ತರಬೇತಿ ಸಂಸ್ಥೆ ನ.19ರಂದು ಜಂಟಿಯಾಗಿ ಆಯೋಜಿ ಸಿದ್ದ ರಾಷ್ಟ್ರನಾಯಕರಿಗೆ ಸಂಸತ್‌ನಲ್ಲಿ ಗೌರವ ಸಮರ್ಪಣೆ’ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯವನ್ನು ಕೋಲಾರದ ಚಿನ್ನದ ಪದಕ ವಿಜೇತ ಹುಡುಗಿ ಕು.ಸ್ಪೂರ್ತಿ ಪ್ರತಿನಿಧಿಸಿದ್ದರು.
ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಣ್ಯ-ಮಾನ್ಯರು, ಸಂಸತ್ ಸದಸ್ಯರು ಇತರೆ ರಾಜ್ಯಗಳ ಯುವ ಪ್ರತಿನಿಧಿಗಳ ಸಮ್ಮುಖದಲ್ಲಿ ತಮ್ಮ ವಿಚಾರ, ನಿಲುವುಗಳನ್ನು ಭಾಷಣದ ಮೂಲಕ ಪ್ರಸ್ತುತ ಪಡಿಸಿದ್ದಾರೆ.
ಭದ್ರಾವತಿ ತಾಲೂಕು ಹರಮಘಟ್ಟ ಗ್ರಾಮದಲ್ಲಿ ಸುಮಾರು 15 ದಿನಗಳ ಹಿಂದೆ 3 ಹಸುಗಳನ್ನ ಭೇಟೆಯಾಡಿದ್ದ ಚಿರತೆ ಬೋನಿಗೆ ಬಿದ್ದಿದೆ. ಚಿರತೆ ಹಾವಳಿಯಿಂದ ಸುತ್ತಮುತ್ತಲಿನ ಗ್ರಾಮದ ಜನರಲ್ಲಿ ಭಯ ಹುಟ್ಟಿಸಿತ್ತು. ಗ್ರಾಮಸ್ಥರಲ್ಲಿ ಭಯವನ್ನ ಹುಟ್ಟಿಸಿತ್ತು. ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆಯವರಿಗೆ ಆಗ್ರಹಿಸಿದ್ದರು. ಇದೀಗ ಕೊನೆಗೂ ಚಿರತೆ ಬೋನಿಗೆ ಬಿದ್ದಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಹರಮಘಟ್ಟ ಗ್ರಾಮದಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ಬೋನು ಇಟ್ಟು ಅದರಲ್ಲಿ ನಾಯಿಯನ್ನ ಇಡಲಾಗಿತ್ತು. ಇಂದು ಬೆಳಗ್ಗೆ ಚಿರತೆ ಬೋನಿಗೆ ಬಿದ್ದಿದೆ.
ಇದೊಂದು ಗಂಡು ಚಿರತೆಯಾಗಿದ್ದು ಸಾಕಷ್ಟು ದಷ್ಟಪುಷ್ಟವಾಗಿದೆ. ಬೋನಿಗೆ ಬಿದ್ದ ಚಿರತೆ ನೋಡಲು ಗ್ರಾಮಸ್ಥರು ಮುಗಿಬಿದ್ದರು. ವಿಷಯ ತಿಳಿದ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರು ಕೂಡ ಚಿರತೆ ನೋಡಲು ಹರಮಘಟ್ಟ ಗ್ರಾಮಕ್ಕೆ ಬಂದಿದ್ದರು.